For the best experience, open
https://m.samyuktakarnataka.in
on your mobile browser.

ಜೀವ ಉಳಿಸುವಲ್ಲಿ ಆಪತ್ಕಾಲ ಯಾನ ಸೇವೆ ಸಹಕಾರಿ

03:39 PM Sep 23, 2024 IST | Samyukta Karnataka
ಜೀವ ಉಳಿಸುವಲ್ಲಿ ಆಪತ್ಕಾಲ ಯಾನ ಸೇವೆ ಸಹಕಾರಿ

ಬೆಂಗಳೂರು: ಇಂದು ಆಪತ್ಕಾಲ ಯಾನ ಸೇವೆ ಯೋಜನೆಯಡಿ ಲೋಕಾರ್ಪಣೆಯಾಗಿರುವ 65 ಅತ್ಯಾಧುನಿಕ ಆಂಬ್ಯುಲೆನ್ಸ್‌ಗಳ ಸೇವೆಗಳು ಅಪಘಾತಕ್ಕೊಳಗಾದವರ ಜೀವ ಉಳಿಸುವಲ್ಲಿ ಆಪತ್ಕಾಲ ಯಾನ ಸೇವೆ ಸಹಕಾರಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
26 ಸುಧಾರಿತ ಹಾಗೂ 39 ಬೇಸಿಕ್ ಲೈಫ್ ಸಪೋರ್ಟ್ ಅಂಬ್ಯುಲೆನ್ಸ್‌ಗಳನ್ನು ಇಂದು ಜನರ ಸೇವೆಗೆ ಮುಕ್ತಗೊಳಿಸಲಾಗಿದ್ದು, ಇವುಗಳನ್ನು ರಾಜ್ಯದ ವಿವಿದ ಜಿಲ್ಲೆಗಳಿಗೆ ಕಳಿಸಲಾಗುವುದು ಎಂದು ತಿಳಿಸಿದರು.

ಅರ್ಕಾವತಿಗೆ ಸಂಬಂಧಿಸಿದ ರಾಜ್ಯಪಾಲರ ಪತ್ರ- ಪರಿಶೀಲಿಸಿ ಕ್ರಮ
ರಾಜ್ಯಪಾಲರು ಅರ್ಕಾವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಹಿಂದೆ ನಾಲ್ಕು ವರ್ಷ ಅವಧಿಯಲ್ಲಿದ್ದಾಗ ವಿಷಯವನ್ನು ಏಕೆ ವಿಧಾನಸಭೆಯಲ್ಲಿ ಪ್ರಸ್ತಾಪಿಸಲಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಿ.ಟಿ.ರವಿಯವರು ರಾಜ್ಯಪಾಲರಿಗೆ ಈಗ ಪತ್ರ ಬರೆದಿದ್ದು, ಹಿಂದೆ ಅವರು ಸಚಿವರಾಗಿದ್ದಾಗ ಕ್ರಮವೇಕೆ ತೆಗೆದುಕೊಳ್ಳಲಿಲ್ಲ ಎಂದು ಮರುಪ್ರಶ್ನಿಸಿದರು. ರಾಜ್ಯಪಾಲರ ಪತ್ರವನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಕ್ಷುಲ್ಲಕ ವಿಚಾರಗಳ ಬಗ್ಗೆ ಉತ್ತರ ಕೋರಿ ರಾಜ್ಯಪಾಲರ ಪತ್ರ
ರಾಜ್ಯಪಾಲರ ನಡೆಗೆ ಸಂಬಂಧಿಸಿದಂತೆ ಮಾನ್ಯ ರಾಷ್ಟ್ರಪತಿಗಳಿಗೆ ದೂರು ಕೊಡುವ ವಿಚಾರ ಇದೆಯೇ ಎಂಬುದಕ್ಕೆ ಪ್ರತಿಕ್ರಯಿಸಿ, ರಾಜ್ಯಪಾಲರು ಸಣ್ಣ ವಿಷಯಗಳ ಬಗ್ಗೆ ಗಮನ ಕೊಡುತ್ತಿದ್ದಾರೆ. ಕನ್ನಡದಲ್ಲಿ ಸಹಿ ಮಾಡುತ್ತಿಲ್ಲವೆಂಬ ಸಣ್ಣ ವಿಷಯದ ಬಗ್ಗೆಯೂ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆದು ವರದಿ ಕೇಳುವ ಬಗ್ಗೆ ಪ್ರಸ್ತಾಪಿಸಿ, ಕನ್ನಡದಲ್ಲಿರುವ ಪತ್ರಗಳಿಗೆ ಕನ್ನಡದಲ್ಲಿ ಹಾಗೂ ಆಂಗ್ಲದಲ್ಲಿ ಪತ್ರಗಳಿಗೆ ಆಂಗ್ಲದಲ್ಲಿ ಸಹಿ ಮಾಡುವುದು ತಪ್ಪಲ್ಲ. ಇಂತಹ ಕ್ಷುಲ್ಲಕ ವಿಚಾರಗಳ ಬಗ್ಗೆ ರಾಜ್ಯಪಾಲರು ಉತ್ತರ ಕೇಳುವುದು ಸರಿಯಲ್ಲ ಎಂದು ತಿಳಿಸಿದರು.

Tags :