ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಜುಲೈ 14 ರಂದು ಸರ್ವಪಕ್ಷ ಸಭೆ

07:45 PM Jul 12, 2024 IST | Samyukta Karnataka

ಬೆಂಗಳೂರು: ಜುಲೈ 14 ರಂದು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗೃಹಕಚೇರಿ ಕೃಷ್ಣಾದಲ್ಲಿ ಇಂದು ಕಾವೇರಿ ನೀರು ನಿಯಂತ್ರಣ ಸಮಿತಿಯು ನೀರು ಬಿಡುವಂತೆ ನೀಡಿರುವ ಆದೇಶದ ಕುರಿತು ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಚರ್ಚೆ ನಡೆಸಿ, ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿರುವ ಅವರು ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಹಾಗೂ ರಾಜ್ಯದ ಮುಂದಿನ ನಡೆ ಏನು ಎಂಬ ಕುರಿತು ಜುಲೈ 14 ರಂದು ಸರ್ವಪಕ್ಷ ಸಭೆ ನಡೆಸಿ ತೀರ್ಮಾನಿಸಲಾಗುವುದು. ಈ ಬಾರಿ ವಾಡಿಕೆ ಮಳೆ ಆಗುವುದೆಂಬ ಹವಾಮಾನ ಮುನ್ಸೂಚನೆ ಇದ್ದರೂ ಈ ವರೆಗೆ ಶೇ. 28 ರಷ್ಟು ಒಳಹರಿವಿನ ಕೊರತೆ ಇದೆ ಎಂದು ಸಿ.ಡಬ್ಲ್ಯೂ.ಆರ್.ಸಿ ಗೆ ಸ್ಪಷ್ಟವಾಗಿ ನಮ್ಮ ನಿಲುವನ್ನು ಹೇಳಿದ್ದೆವು. ಜೊತೆಗೆ ಜುಲೈ ಅಂತ್ಯದ ವರೆಗೆ ಯಾವುದೇ ತೀರ್ಮಾನ ಮಾಡದಂತೆ ಮನವಿ ಮಾಡಿದ್ದೆವು. ಆದರೂ ಸಿ.ಡಬ್ಲ್ಯೂ.ಆರ್.ಸಿ ಅವರು ಜುಲೈ 12 ರಿಂದ ಪ್ರತಿ ದಿನ ಒಂದು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ.
ಸರ್ಕಾರ ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕೆಂಬ ಅಭಿಪ್ರಾಯ ಇಂದಿನ ಸಭೆಯಲ್ಲಿ ವ್ಯಕ್ತವಾಗಿದೆ. ಜೊತೆಗೆ ಜುಲೈ 14 ರಂದು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಕರ್ನಾಟಕದ ನೀರಿನ ವಿಚಾರದಲ್ಲಿ ಎಲ್ಲ ಪಕ್ಷದವರೂ ಒಟ್ಟಾಗಿದ್ದೇವೆ. ಆದ್ದರಿಂದ ಸರ್ವಪಕ್ಷ ಸಭೆ ನಡೆಸಲಾಗುವುದು. ಕೇಂದ್ರ ಮಂತ್ರಿಗಳು, ಕಾವೇರಿ ಭಾಗದ ಲೋಕಸಭೆ, ರಾಜ್ಯಸಭೆ ಸದಸ್ಯರು ಮತ್ತು ಶಾಸಕರನ್ನು ಸಹ ಸಭೆಗೆ ಆಹ್ವಾನಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಮುಂದಿನ ಹೆಜ್ಜೆಯ ಬಗ್ಗೆ ತೀರ್ಮಾನಿಸಲಾಗುವುದು. ಕಾವೇರಿ ಜಲಾನಯನ ಪ್ರದೇಶದ ಎಲ್ಲಾ 4 ಜಲಾಶಯಗಳಲ್ಲಿ ಒಟ್ಟು ಕೇವಲ 60 ಟಿಎಂಸಿ ನೀರು ಲಭ್ಯವಿದೆ. ಕೃಷಿ ಚಟುವಟಿಕೆಗಳಿಗೂ ನಾವು ನೀರು ಒದಗಿಸಬೇಕಾಗಿದೆ. ಮಳೆ ಕೊರತೆಯನ್ನು ಗಮನದಲ್ಲಿರಿಸಿ ಜುಲೈ ಅoತ್ಯದವರೆಗೆ ಕಾಯಲು ಮನವಿ ಮಾಡಿದ್ದೆವು, ತೀರ್ಪು ನೋಡಿದರೆ ನಮ್ಮ ಮನವಿಯನ್ನು ಪರಿಗಣಿಸಿದಂತೆ ಕಾಣುತ್ತಿಲ್ಲ. ಬಿಳಿಗುಂಡ್ಲುವಿನಲ್ಲಿ ಅಳತೆ ಮಾಡುವಾಗ, ಕಬಿನಿ ಅಣೆಕಟ್ಟಿನ ಒಳಹರಿವಿನಷ್ಟು ಕ್ಯೂಸೆಕ್ಸ್‌ನಷ್ಟು ನೀರನ್ನು ತಮಿಳು ನಾಡಿಗೆ ಬಿಡಲಾಗುತ್ತಿದೆ ಎಂದರು.

Next Article