For the best experience, open
https://m.samyuktakarnataka.in
on your mobile browser.

ಜುಲೈ 8 ರಿಂದ ನಾಲೆಗಳಿಗೆ ನೀರು ಬಿಡುಗಡೆ

08:07 PM Jul 04, 2024 IST | Samyukta Karnataka
ಜುಲೈ 8 ರಿಂದ ನಾಲೆಗಳಿಗೆ ನೀರು ಬಿಡುಗಡೆ

ಮಂಡ್ಯ: ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಎಸ್ ಜಲಾಶಯದ ಮಟ್ಟ 100 ಅಡಿ ಕ್ಕಿಂತ ಹೆಚ್ಚುವಾರಿಯಾಗಿರುವುದರಿಂದ ಜುಲೈ 6 ರಂದು ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ, ಜುಲೈ 8 ರಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ..

ಕಳೆದ ಸಾಲಿನಲ್ಲಿ ಬರಗಾಲದ ಹಿನ್ನಲೆ ರೈತರ ಬೇಡಿಕೆಯಂತೆ ನೀರು ಹರಿಸಲು ಸಾಧ್ಯವಾಗಿರಲಿಲ್ಲ. ಜಲಾಶಯದಲ್ಲಿ ನೀರಿನ ಮಟ್ಟ 100 ಅಡಿ ತಲುಪಿದ ನಂತರ ನೀರು ಹರಿಸುವುದಾಗಿ ಭರವಸೆ ನೀಡಲಾಗಿತ್ತು.
ವಿ.ಸಿ.ನಾಲೆ ಆಧುನೀಕರಣ ಕಾಮಗಾರಿ ನಡೆಯುತ್ತಿದ್ದು, ರೈತರಿಗೆ ನೀರು ನೀಡಲು ತೊಂದರೆಯಾಗುತ್ತದೆ ಎಂದು ಹಲವಾರು ದೂರುಗಳು ಕೇಳಿ ಬಂದಿತ್ತು. ಇತ್ತೀಚೆಗೆ ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಾಲೆಗಳಿಗೆ ನೀರು ಹರಿಸಲು ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಲಾಗಿದೆ.

ಜುಲೈ 6 ರಂದು ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ಜುಲೈ 8 ರಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ರೈತರು ತಮ್ಮ ಕೃಷಿ ಚಟುವಟಿಕೆಗಳನ್ನು ಪ್ರಾರಂಭಿಸಿ ಕೊಂಡು ಉತ್ತಮ ಬೆಳೆ ಬೆಳೆಯಿರಿ. ರೈತರೊಂದಿಗೆ ಸರ್ಕಾರ ಸದಾ ಇದ್ದು, ಅವರ ಶ್ರೇಯೋಭಿವೃದ್ದಿಗೆ ಸದಾ ಚಿಂತಿಸುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.