ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶಕ್ಕೆ ರಾಹುಲ್ ಗಾಂಧಿ ಗೈರು
ಬೆಳಗಾವಿ: 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶಕ್ಕೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬರುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸದ್ದಾರೆ.
ಅನಾರೋಗ್ಯದಿಂದಾಗಿ ರಾಹುಲ್ ಗಾಂಧಿ ಬೆಳಗಾವಿ ಪ್ರವಾಸ ರದ್ದುಗೊಳಿಸಿದ್ದು, ನಗರದಲ್ಲಿ ಇಂದು ನಡೆಯುವ ಸಮಾವೇಶದಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳುತ್ತಿಲ್ಲ ಆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕಾ ಗಾಂಧಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸವಿನೆನಪಿಗೆ ಸುವರ್ಣ ವಿಧಾನಸೌಧ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ ಪ್ರತಿಮೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉಪಸ್ಥಿತಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾವರಣ ಮಾಡುವುದರಲ್ಲಿದ್ದರು. ಆದ್ರೆ ಅನಾರೋಗ್ಯ ರಾಹುಲ್ ಗಾಂಧಿ ಬೆಳಗಾವಿ ಪ್ರವಾಸ ರದ್ದುಗೊಳಿಸಿದ್ದಾರೆ. ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿ ಇನ್ನಿತರ ನಾಯಕರು ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು ಉಪಸ್ಥಿತರಿರಲಿದ್ದಾರೆ. ಇದೇ ವೇಳೆ ಶತಮಾನದ ಹಿಂದೆ ನಡೆದ ಅಧಿವೇಶನದಲ್ಲಿ ಗಾಂಧೀಜಿ ಮಾಡಿದ್ದ ಅಧ್ಯಕ್ಷೀಯ ಭಾಷಣದ ಸಂದೇಶ ಮತ್ತು ‘ಗಾಂಧಿ ಭಾರತ’ ಪುಸ್ತಕ ಬಿಡುಗಡೆ ಆಗಲಿದೆ.