ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಜೋಶಿ ಅವರಿಗೆ ಕಳಂಕ ಅಂಟಿಸುವ ವಿಫಲ ಯತ್ನ

11:39 AM Oct 19, 2024 IST | Samyukta Karnataka

ಬೆಂಗಳೂರು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಹೆಸರನ್ನು ಸಂಬಂಧಪಡದ ಪ್ರಕರಣವೊದರಲ್ಲಿ ಎಳೆದು ತರುವ ಮೂಲಕ ಕಾಂಗ್ರೆಸ್ಸಿಗರು ವಿಘ್ನ ಸಂತೋಷ ಪಡಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಸಚಿವ ದಿನೇಶ ಗುಂಡೂರಾವ ಅವರು ಅಸಂಬದ್ಧವಾಗಿ ಜೋಶಿಯವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ಆರೋಪಿತ ಗೋಪಾಲ ಜೋಷಿ ಅವರೊಂದಿಗೆ ಕಳೆದ 32 ವರ್ಷಗಳಿಂದಲೂ ಸಂಪರ್ಕ ಕಡಿದುಕೊಂಡು ಯಾರೊಂದಿಗೂ ತಮ್ಮ ಸಂಬಂಧ ಬೆರೆಸದಂತೆ ಮಾನ್ಯ ಪ್ರಹ್ಲಾದ್ ಜೋಶಿ ಅವರು ನ್ಯಾಯಾಲಯದಲ್ಲಿ 2013ರಲ್ಲೇ ತಡೆಯಾಜ್ಞೆ ತಂದಿದ್ದಾರೆ, ಅಲ್ಲದೇ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಅದರ ವಿವರವಿರುವುದಾಗಿಯೂ ಸ್ಪಷ್ಟಪಡಿಸಿದ್ದಾರೆ.
ಇಷ್ಟಾಗಿಯೂ ಮುಡಾ ಹಾಗೂ ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಂತೆ ಹತ್ತು- ಹಲವು ಹಗರಣಗಳಲ್ಲಿ ಸಿಲುಕಿ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಹಾಗೂ ಇತರ ಮಂತ್ರಿಗಳು ನೈತಿಕತೆ ಗಾಳಿಗೆ ತೂರಿ ತಮ್ಮ ಸ್ಥಾನಗಳಿಗೆ ಭಂಡತನದಿಂದ ಅಂಟಿ ಕುಳಿತಿದ್ದಾರೆ.
ಹತಾಶೆಯ ಅಂಚಿಗೆ ತಲುಪಿರುವ ಕಾಂಗ್ರೆಸ್ಸಿಗರು ಜೋಷಿಯವರ ವಿಚಾರದಲ್ಲಿ ‘ಮೊಸರಿನಲ್ಲಿ ಕಲ್ಲು ಹುಡುಕಲು ಹೊರಟಿದ್ದಾರೆ'. ಪ್ರಹ್ಲಾದ್ ಜೋಶಿ ಅವರು ತಮ್ಮ ಇಡೀ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಮಸಿ ಅಂಟಿಸಿಕೊಂಡವರಲ್ಲ ಅವರ ಸಾಮರ್ಥ್ಯ ಹಾಗೂ ಅನುಭವವನ್ನು ಪರಿಗಣಿಸಿ ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಂಪುಟದಲ್ಲಿ ಮಹತ್ವದ ಸ್ಥಾನ ಕಲ್ಪಿಸಿಕೊಟ್ಟಿದ್ದಾರೆ. ಇದನ್ನು ಸಹಿಸದ ಕೆಲವು ರಾಜಕೀಯ ಪಟ್ಟಭದ್ರಾ ಹಿತಾಸಕ್ತಿಗಳು ಜೋಶಿ ಅವರಿಗೆ ಕಳಂಕ ಅಂಟಿಸುವ ವಿಫಲ ಯತ್ನ ನಡೆಸಿದ್ದಾರೆ.
ಆಧಾರ ರಹಿತ ಆರೋಪಗಳಿಂದ ಭಾರತೀಯ ಜನತಾ ಪಾರ್ಟಿಯ ವರ್ಚಸ್ಸಿಗೆ ಧಕ್ಕೆ ತರಬಹುದು ಎಂದು ಕಾಂಗ್ರೆಸ್ಸಿಗರು ಅಂದುಕೊಂಡಿದ್ದರೆ ಅದು ಕೇವಲ ಅವರ ಭ್ರಮೆ ಅಷ್ಟೇ.

Tags :
#ಅಕ್ರಮ#ಪ್ರಲ್ಹಾದಜೋಶಿ#ಬೆಂಗಳೂರು#ವಿಜಯೇಂದ್ರ#ಹುಬ್ಬಳ್ಳಿ
Next Article