ಟಾರ್ಗೆಟ್ ಮಾಡುವವರ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ
ನಾಳೆ ಹಲವು ಸಭೆಗಳು ನಡೆಯಲಿವೆ
ಬೆಂಗಳೂರು: ಟಾರ್ಗೆಟ್ ಮಾಡುವವರ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ. ಬಸನಗೌಡ ಪಾಟೀಲ್ ಯತ್ನಾಳ್ ಇರಲಿ, ಯಾರೇ ಆಗಲಿ. ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ, ಕೆಲಸ ಮಾಡದೇ ಸುಮ್ಮನೆ ಹರಟುವವರ ಮಾತು ತನ್ನ ಮೇಲೆ ಯಾವುದೇ ಪರಿಣಾಮ ಬೀರೋದಿಲ್ಲ,ನಾಳೆ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್, ತಮಿಳುನಾಡಿನ ಪೊನ್ನು ರಾಧಾ ಕೃಷ್ಣ, ಸಹ ಉಸ್ತುವಾರಿ ಸುಧಾಕರ್ ರೆಡ್ಡಿ ಬರುತ್ತಿದ್ದಾರೆ. ಬಿಜೆಪಿ ಕಚೇರಿಯಲ್ಲಿ 3 ಗಂಟೆಗೆ ಚುನಾಯಿತ ಸದಸ್ಯರು, ಸಂಸದರು, ಶಾಸಕರ ಜೊತೆ ಸಭೆ ಕರೆದಿದ್ದಾರೆ. ಅಲ್ಲಿ ಎಲ್ಲರ ಅಭಿಪ್ರಾಯ ಪಡೆಯುತ್ತಾರೆ. ಸಂಜೆ 4 ಗಂಟೆಗೆ ಸಂಘಟನಾ ಪರ್ವ, ಜಿಲ್ಲಾ ಅಧ್ಯಕ್ಷರ ಚುನಾವಣೆ ಬಗ್ಗೆ ಸಭೆ ಇದೆ. ರಾಜ್ಯಾಧ್ಯಕ್ಷರ ಚುನಾವಣೆ ಬಗ್ಗೆ ಚರ್ಚೆ ಆಗುತ್ತದೆ. ಚುನಾವಣೆ ಆಫೀಸರ್ ಸಭೆ ಕೂಡ ನಡೆಯುತ್ತದೆ. ನಂತರ ರಾತ್ರಿ 7 ಗಂಟೆಗೆ ಕೋರ್ ಕಮಿಟಿ ಸಭೆ ನಡೆಯುತ್ತದೆ. ನಾಳಿನ ಸಭೆಯಲ್ಲಿ ರಾಜ್ಯದ ಪರಿಸ್ಥಿತಿ ಬಗ್ಗೆ, ರಾಜ್ಯಾಧ್ಯಕ್ಷ ಬಗ್ಗೆ ಚರ್ಚೆ ನಡೆಯುತ್ತದೆ, ನಾಳೆ ಹಲವು ಸಭೆಗಳು ನಡೆಯಲಿವೆ ಎಂದು ತಿಳಿಸಿದರು.