ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ

03:53 PM Nov 29, 2023 IST | Samyukta Karnataka

ಹೊಸದಿಲ್ಲಿ: ಬಿಸಿಸಿಐ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ಇತರ ಸಹಾಯಕ ಸಿಬ್ಬಂದಿಗೆ ಒಪ್ಪಂದದ ವಿಸ್ತರಣೆಯನ್ನು ಘೋಷಿಸಿದೆ.
ರಾಹುಲ್ ದ್ರಾವಿಡ್ ಅವರ ಮಾರ್ಗದರ್ಶನದಲ್ಲಿ ಭಾರತ ತಂಡವು ವಿಶ‍್ವ ಟೆಸ್ಟ್ ಚಾಂಪಿಯನ್ ಶಿಪ್ ಹಾಗೂ ಏಕದಿನ ವಿಶ್ವಕಪ್ ಕ್ರೀಡಾಕೂಟಗಳೆರಡಲ್ಲೂ ರನ್ನರ್ಸ್ ಅಪ್ ಆಗಿ ಹೊರಹೊಮ್ಮಿದ್ದು, ಕಳೆದ ಎರಡು ವರ್ಷಗಳಲ್ಲಿ ಉತ್ತಮ ದಾಖಲೆಯನ್ನೂ ಹೊಂದಿದೆ. ಹೀಗಾಗಿ ಬಿಸಿಸಿಐನಲ್ಲಿರುವ ಹಲವಾರು ಮಂದಿ ಅವರನ್ನೇ ಮುಖ್ಯ ತರಬೇತುದಾರರನ್ನಾಗಿ ಮುಂದುವರಿಸಿದರೆ ಹಿರಿಯರ ತಂಡವು ನಿರಂತರತೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿದೆ ಎಂಬ ಅಭಿಪ್ರಾಯ ಹೊಂದಿದ್ದಾರೆ ಎಂದು ಹೇಳಲಾಗಿದೆ. ರಾಹುಲ್ ದ್ರಾವಿಡ್ ಭಾರತದ ಮುಖ್ಯ ಕೋಚ್ ಆಗಿ ಮುಂದುವರಿಯಲಿದ್ದಾರೆ. ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್, ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಮತ್ತು ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಸೇರಿದಂತೆ ಸಹಾಯಕ ಸಿಬ್ಬಂದಿಯ ಇತರ ಸದಸ್ಯರ ಒಪ್ಪಂದವನ್ನು ಬಿಸಿಸಿಐ ವಿಸ್ತರಿಸಿದೆ. ರಾಹುಲ್ ದ್ರಾವಿಡ್ ಅವರ ಎರಡನೇ ಅವಧಿಯ ಮುಖ್ಯ ಕೋಚ್‌ ಆಗಿ ಭಾರತದ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಆರಂಭವಾಗಲಿದೆ. ಟೀಂ ಇಂಡಿಯಾ ಡಿಸೆಂಬರ್ 10 ರಿಂದ ದಕ್ಷಿಣ ಆಫ್ರಿಕಾ ವಿರುದ್ಧ 3 ಟಿ20, 3 ಏಕದಿನ ಮತ್ತು 2 ಟೆಸ್ಟ್ ಪಂದ್ಯಗಳನ್ನು ಆಡಲಿದೆ.

Next Article