ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ: ಒಂದೇ ಕುಟುಂಬದ ಮೂವರು ಸಾವು
10:40 AM Jan 07, 2025 IST | Samyukta Karnataka
ತುಮಕೂರು: ಬೆಳಗಿನ ಜಾವ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ನಡೆದಿದೆ,
ತುಮಕೂರು ತಾಲ್ಲೂಕಿನ ಕೋರ ಹತ್ತಿರದ ಓಬಳಾಪುರ ಗೇಟ್ ಬಳಿ ಮಧುಗಿರಿ ತಾಲ್ಲೂಕಿನ ಪುರವರ ಹೋಬಳಿ ಗೊಂದಿಹಳ್ಳಿ ಗ್ರಾಮದ ಮಮ್ತಾಜ್ (38) ಶಾಖೀರ್ ಹುಸೇನ್ (48), ಮಹ್ಮದ್ ಆಸೀಫ್ (12) ಮೃತರಾಗಿದ್ದಾರೆ. ತುಮಕೂರಿನಿಂದ ಮಧುಗಿರಿ ಕಡೆಗೆ ಹೋಗುವಾಗ ರಸ್ತೆಯಲ್ಲಿ ಮುಂದೆ ಸಾಗುತ್ತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ದಟ್ಟ ಮಂಜಿನ ಕಾರಣ ದಾರಿ ಕಾಣದೇ ಅಪಘಾತ ಸಂಭವಿಸಿದೆ ಎನ್ನಲಾಗಿದೆ.