ಡಬಲ್ ಬೆಂಚ್‌ನಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ
ಚಿಕ್ಕಮಗಳೂರು: ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು ನಮ್ಮವರು ದ್ವಿಸದಸ್ಯ ಪೀಠಕ್ಕೆ(ಡಬಲ್‌ಬೆಂಚ್‌ಗೆ) ಮನವಿ ಸಲ್ಲಿಸಲಿದ್ದಾರೆಂದು ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಂಖಾನ್ ತಿಳಿಸಿದರು.
ಜಿಲ್ಲಾ ಪಂಚಾಯಿತಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನೆ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕೋರ್ಟ್ ಬಗ್ಗೆ ಮಾತನಾಡುವುದು ಸರಿಯಲ್ಲ ಕೇಸ್ ನಮ್ಮ ಪರವಾಗಿ ಆಗುತ್ತದೆ ಎಂದು ತಿಳಿದಿದ್ದೇವು. ಮುಖ್ಯಮಂತ್ರಿಗಳು ಶೇ. ೧೦೦ರಷ್ಟು ಸರಿಯಾಗಿದ್ದಾರೆ. ಇದು ಎಲ್ಲರಿಗೂ ಗೊತ್ತಿದೆ. ಆದರೂ ಈ ರೀತಿ ಜಡ್ಜ್‌ಮೆಂಟ್ ಆಗಿದೆ ಎಂದು ಹೇಳಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೂ ಇದೇ ರೀತಿ ಆಗಿತ್ತು. ಸರ್ವೋಚ್ಚ ನ್ಯಾಯಾಲಯದಲ್ಲಿ ನ್ಯಾಯ ದೊರಕಿತು. ಡಬಲ್ ಬೆಂಚ್‌ನಲ್ಲಿ ನ್ಯಾಯ ಸಿಗುವ ವಿಶ್ವಾಸ ಇದೆ. ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪನವರ ಕೇಸ್ ಬೇರೆ, ಸಿದ್ದರಾಮಯ್ಯನವರ ಕೇಸ್ ಬೇರೆ, ಮುಖ್ಯಮಂತ್ರಿಗಳು ರಾಜೀನಾಮೆ ನೀಡುವ ಪ್ರಶ್ನೆಯೇ ಬರುವುದಿಲ್ಲವೆಂದರು.