ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಡಾ. ಪ್ರಭಾ ಮಲ್ಲಿಕಾರ್ಜುನ ಹೆಸರಲ್ಲಿ ನಕಲಿ FB ಖಾತೆ ತೆರೆದು ಹಣಕ್ಕೆ ಬೇಡಿಕೆ!

07:21 PM Jun 03, 2024 IST | Samyukta Karnataka

ದಾವಣಗೆರೆ: ಶಾಮನೂರು ಮನೆತನದ ಸೊಸೆ, ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್‌ರ ಹೆಸರಿನಲ್ಲಿ ಯಾರೋ ಆನ್‌ಲೈನ್ ವಂಚಕರು ನಕಲಿ ಫೇಸ್‌ಬುಕ್ ಖಾತೆ ತೆರೆದು, ಸಾರ್ವಜನಿಕರಲ್ಲಿ ಹಣದ ಬೇಡಿಕೆ ಇಡುತ್ತಿರುವ ಘಟನೆ ನಡೆದಿದೆ‌.
ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪ್ರಭಾ ಮಲ್ಲಿಕಾರ್ಜುನ(ಫಾರ್ ಎಂಪಿ) ಹೆಸರಿನಲ್ಲಿ ನಕಲಿ ಖಾತೆಯನ್ನು ತೆರೆದಿರುವ ಆನ್‌ಲೈನ್ ವಂಚಕರು ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಹಣದ ಬೇಡಿಕೆ ಇಡುತ್ತಿದ್ದು, 7 ಸಾವಿರ, 15 ಸಾವಿರ, 25 ಸಾವಿರ ರೂ.,ಗಳನ್ನು ತುರ್ತಾಗಿ ಗೂಗಲ್ ಪೇ, ಫೋನ್ ಪೇ ಮಾಡುವಂತೆ ಕೇಳುತ್ತಿರುವ ಹಿನ್ನೆಲೆಯಲ್ಲಿ ಇಂತಹ ಆನ್‌ಲೈನ್ ವಂಚಕರ ಮನವಿಗೆ ಕಿವಿಗೊಡದಂತೆ ಡಾ.ಪ್ರಭಾ ಮಲ್ಲಿಕಾರ್ಜುನರ ಕಚೇರಿ ಮನವಿ ಮಾಡಿದೆ.
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ ಚುನಾವಣೆ ಫಲಿತಾಂಶದ ಕಡೆಗೆ ಎಲ್ಲರ ದೃಷ್ಟಿ ನೆಟ್ಟಿದೆ. ಗೆಲುವು ತಮ್ಮದೇ ಎಂಬ ನಿರೀಕ್ಷೆಯಲ್ಲಿ ಕಾಂಗ್ರೆಸ್ ಲೆಕ್ಕಾಚಾರದಲ್ಲಿ, ಆತ್ಮವಿಶ್ವಾಸದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರಭಾ ಮಲ್ಲಿಕಾರ್ಜುನರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆಯನ್ನು ತೆರೆದು, ಆನ್‌ಲೈನ್ ವಂಚಕರು ಹಣ ಕಳಿಸುವಂತೆ ಮನವಿ ಮಾಡುತ್ತಿರುವ ವಿಚಾರ ಗೊತ್ತಾಗಿ, ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರಭಾ ಮಲ್ಲಿಕಾರ್ಜುನರ ಗಮನಕ್ಕೆ ತಂದಿದ್ದು, ಈ ತರಹದ ಬೇಡಿಕೆಗಳಿಗೆ ಸ್ಪಂದಿಸದಿರಲು ತಮ್ಮಲ್ಲಿ ಡಾ. ಪ್ರಭಾ ಮಲ್ಲಿಕರ್ಜುನ ಮನವಿ ಮಾಡಿದ್ದಾರೆ.

Next Article