ಡಿಕೆಶಿಗೆ ಸುಪ್ರೀಂ ಕೋರ್ಟ್ನಿಂದ ಬಿಗ್ ರಿಲೀಫ್
01:34 PM Mar 05, 2024 IST | Samyukta Karnataka
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪ ಎದುರಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ED) 120B ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದೆ. ಇದರಿಂದಾಗಿ ಇದೀಗ ಡಿಕೆ ಶಿವಕುಮಾರ್ ಜಾರಿ ನಿರ್ದೇಶನಾಲಯದ ತನಿಖೆಯಿಂದ ನಿರಾಳರಾಗುವಂತಾಗಿದೆ. ED ದಾಖಲಿಸಿರುವ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ. ಈ ಮೂಲಕ 2018ರ ಹಣ ವರ್ಗಾವಣೆ ಪ್ರಕರಣವನ್ನು ರದ್ದು ಮಾಡಿದೆ.