For the best experience, open
https://m.samyuktakarnataka.in
on your mobile browser.

ಡಿ. 22ಕ್ಕೆ ಕಲಬುರಗಿ ಜಯದೇವ ಆಸ್ಪತ್ರೆ ಕಟ್ಟಡ ಉದ್ಘಾಟನೆ

12:09 PM Dec 21, 2024 IST | Samyukta Karnataka
ಡಿ  22ಕ್ಕೆ ಕಲಬುರಗಿ ಜಯದೇವ ಆಸ್ಪತ್ರೆ ಕಟ್ಟಡ ಉದ್ಘಾಟನೆ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಜಯದೇವ ಹೃದ್ರೋಗ ವಿಜ್ಞಾನ, ಸಂಶೋಧನಾ ಸಂಸ್ಥೆ ಮತ್ತು ಆಸ್ಪತ್ರೆಯ ನೂತನ ಕಟ್ಟಡ ಡಿ. 22ರಂದು ಉದ್ಘಾಟನೆಯಾಗಲಿದೆ.
ಕೆಕೆಆರ್‌ಡಿಬಿಯ 262 ಕೋಟಿ ರೂ. ವೆಚ್ಚದಲ್ಲಿನಿರ್ಮಾಣಗೊಂಡಿರುವ ಹೊಸ ಕಟ್ಟಡದಲ್ಲಿ ತಿಂಗಳಾಂತ್ಯದಿಂದ ಕಾರ್ಯನಿರ್ವಹಿಸಲಿದೆ. ಕಲಬುರಗಿ ನಗರದ ಸರ್ದಾರ್ ವಲ್ಲಭಾಯ್ ಪಟೇಲ್ ರಸ್ತೆಯ ಎಸ್.ಎಂ.ಪಂಡಿತ್ ರಂಗಮಂದಿರದ ಎದುರು ವಿಶಾಲವಾದ ಕಟ್ಟಡದಲ್ಲಿ ಪ್ರಾರಂಭವಾಗುತ್ತಿರುವುದರಿಂದ ಆಪತ್ಕಾಲದಲ್ಲಿರುವ ರೋಗಿಗಳಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರಕಲಿದೆ.

Tags :