For the best experience, open
https://m.samyuktakarnataka.in
on your mobile browser.

ಡಿ.9ರಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ

04:58 PM Nov 28, 2024 IST | Samyukta Karnataka
ಡಿ 9ರಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ

ಮಂಗಳೂರು : ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 19 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದೆ ಎಂದು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ.
ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಇರುವುದರಿಂದ ಅಧಿವೇಶನವನ್ನು ಡಿಸೆಂಬರ್ 19 ಕ್ಕೆ ಮುಕ್ತಾಯಗೊಳಿಸಲು ಸರಕಾರವು ನಿರ್ಧರಿಸಿದೆ. ಅಧಿವೇಶನ ಮುಂದುವರಿಸುವ ಕುರಿತು ಡಿ.9ರಂದು ಸ್ಪೀಕರ್ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಕಾನೂನು ಸಚಿವರು ಎಲ್ಲಾ ರಾಜಕೀಯ ಮುಖಂಡರು, ವಿರೋಧ ಪಕ್ಷದ ಮುಖಂಡರು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು, ಅಧಿವೇಶನದಲ್ಲಿ ರಾಜ್ಯದ ಅಭಿವೃದ್ಧಿ ಹಾಗೂ ಉತ್ತರ ಕರ್ನಾಟಕದ ಅಭಿವೃದ್ಧಿ ವಿಷಯಗಳ ಕುರಿತು ಚರ್ಚೆಯಾಗಬೇಕಿದೆ.

ಅಧಿವೇಶನಕ್ಕೆ ಬಂದು ತಿಕ್ಕಾಟ ಮಾಡಬೇಡಿ: ಅಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳು ಸಹಕರಿಸಬೇಕು, ಸರ್ಕಾರ ಮತ್ತು ಪ್ರತಿಪಕ್ಷಗಳು ತಿಕ್ಕಾಟ ನಡೆಸುವುದು ಪ್ರಜಾಪ್ರಭುತ್ವದ ಸೌಂದರ್ಯ. ಅವರಿಗೆ ತಿಕ್ಕಾಟ ನಡೆಸಲು ಡಿಸೆಂಬರ್ 9ರವರೆಗೆ ಸಮಯವಿದೆ. ಅಲ್ಲಿಯವರೆಗೆ ತಿಕ್ಕಾಟ ಮಾಡಿ. ಆದರೆ, ಅಧಿವೇಶನಕ್ಕೆ ಬಂದು ತಿಕ್ಕಾಟ ಮಾಡಬೇಡಿ. ಅಲ್ಲಿ ರಾಜ್ಯದ ಜನರ ಬಗ್ಗೆ, ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚರ್ಚಿಸಿ. ಈ ಅಧಿವೇಶನದಲ್ಲಿ ಅಭಿವೃದ್ಧಿ ಬಗ್ಗೆ ಚರ್ಚಿಸಿದರೆ ಉತ್ತರ ಕರ್ನಾಟಕದವರಿಗೆ ಕೊಡುವ ಗೌರವವಾಗುತ್ತದೆ ಎಂದರು.