ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಡ್ರೋನ್‌ ಪ್ರತಾಪ್‌ಗೆ ನ್ಯಾಯಾಂಗ ಬಂಧನ

01:20 PM Dec 16, 2024 IST | Samyukta Karnataka

ತುಮಕೂರು: ನೀರಿಗೆ ಸೋಡಿಯಂ ಬೆರೆತಾಗ ಹೇಗೆ ಸ್ಫೋಟಗೊಳ್ಳುತ್ತದೆ ಎನ್ನುವ ಪ್ರಯೋಗ ಮಾಡಿದ ಡ್ರೋನ್‌ ಪ್ರತಾಪ್‌ಗೆ ನ್ಯಾಯಾಂಗ ಬಂಧನ ಆದೇಶ ನೀಡಲಾಗಿದೆ.
ಪ್ರತಾಪ್‌ ವಿರುದ್ದ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ 288 ಮತ್ತು ಸ್ಫೋಟಕ ವಸ್ತುಗಳ ಕಾಯಿದೆ ಸೆಕ್ಷನ್‌ 3ರ ಅಡಿ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಜನಕಲೋಟಿ ಗ್ರಾಮದಲ್ಲಿನ ರೈತರೊಬ್ಬರ ಜಮೀನಿನಲ್ಲಿರುವ ಕೃಷಿ ಹೊಂಡದ ನೀರಿಗೆ ಸೋಡಿಯಂ ಹಾಕಿ ಸ್ಫೋಟ ಮಾಡಿದ ಪ್ರಕರಣದಲ್ಲಿ ಬಂಧಿತನಾಗಿರುವ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಡ್ರೋನ್‌ ಪ್ರತಾಪ್‌ನನ್ನು ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯವು 10 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ. ನೀರಿಗೆ ಸೋಡಿಯಂ ಮೆಟಲ್‌ ಎಸೆದಾಗ ಭಾರಿ ಶಬ್ದದೊಂದಿಗೆ ಸ್ಫೋಟಗೊಂಡಿತ್ತು. ಇದರ ವಿಡಿಯೊವನ್ನು ಪ್ರತಾಪ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

Tags :
#drone#DronePratap#ಅಪರಾಧ#ತುಮಕೂರು
Next Article