For the best experience, open
https://m.samyuktakarnataka.in
on your mobile browser.

ತನಿಖೆಯ ಹಿಂದೆ ರಾಜಕೀಯ ದುರುದ್ದೇಶ…

01:38 PM Dec 04, 2024 IST | Samyukta Karnataka
ತನಿಖೆಯ ಹಿಂದೆ ರಾಜಕೀಯ ದುರುದ್ದೇಶ…

ಮಂಡ್ಯ: ಹೈಕೋರ್ಟ್‌ನಲ್ಲಿ ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ ಇ.ಡಿ ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಇ.ಡಿ ಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು, ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ.

ಈ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ ನಮ್ಮ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ.

ಡಿಸೆಂಬರ್ 24 ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ ಇ.ಡಿ ಯವರು ಲೋಕಾಯುಕ್ತಕ್ಕೆ ವರದಿ ನೀಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ ಎಂದರು.

Tags :