ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ತಾಕತ್ತಿದ್ದರೆ ಸಿಡಿ ಬಿಡುಗಡೆ ಮಾಡಲಿ

09:56 PM Oct 15, 2024 IST | Samyukta Karnataka

ಬೆಂಗಳೂರು: ತಾಕತ್ತಿದ್ದರೆ ಅವನು ನಿಜವಾಗಿ ಅವರಪ್ಪನಿಗೆ ಹುಟ್ಟಿರುವುದು ನಿಜವಾಗಿದ್ದರೆ ನನ್ನ ಮೇಲಿನ ಸಿ.ಡಿಯನ್ನು ಬಿಡುಗಡೆ ಮಾಡಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಹಿರಂಗ ಸವಾಲು ಹಾಕಿದ್ದಾರೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸುಮ್ಮನಿರದಿದ್ದರೆ ಅವರ ಸಿಡಿ ಬಿಡುಗಡೆ ಮಾಡುತ್ತೇನೆ ಎಂದು ವಿಜಾಪುರದ ಹೆಚ್ಚುವರಿ ಜಿಲ್ಲಾ ಸರ್ಕಾರಿ ಅಭಿಯೋಜಕ ಎಸ್.ಎಸ್. ಖಾದ್ರಿ ಮತ್ತು ಮುಸ್ಲಿಂ ಮುಖಂಡರು ಹೇಳಿದ್ದರು.
ಸಿಡಿ ಹೇಳಿಕೆ ಕುರಿತು ಸಿಡಿಮಿಡಿಗೊಂಡಿರುವ ಯತ್ನಾಳ್ ಅವರು, ಈ ಕುರಿತು ಎಕ್ಸ್‌ನಲ್ಲಿ ತಿರುಗೇಟು ನೀಡಿದ್ದು, ಖಾದ್ರಿ ಎಂಬ ಒಬ್ಬ ವಕ್ಪ್ ಆಸ್ತಿ ಲೂಟಿಕೋರ, ಹಿಂದೆ ಜಿಲ್ಲೆಯಿಂದ ಗಡೀಪಾರಾಗಿದ್ದವನು, ನಾವು ವಕ್ಪ್ ಆಸ್ತಿಯ ಲೂಟಿಯ ಬಗ್ಗೆ ಪ್ರತಿಭಟನೆಗೆ ಮುಂದಾಗಿರುವಾಗ ನನ್ನ ಸಿ.ಡಿ ಬಿಡುಗಡೆ ಮಾಡುತ್ತೀನಿ ಎಂದು ಹೇಳಿರುವುದನ್ನು ನಾನು ಗಮನಿಸಿದ್ದೇನೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಹಿಂದೆಯೂ ನಾನು ಹೇಳಿದ್ದೆ ಅವರ ಅಪ್ಪನಿಗೆ ಯಾರಾದರು ಹುಟ್ಟಿರುವವರು ಬಿಡುಗಡೆ ಮಾಡಲಿ ಎಂದು, ಈಗ ಅದನ್ನೇ ಪುನರುಚ್ಚರಿಸುತ್ತಿದ್ದೇನೆ.
ಇಂತಹ ಅಯೋಗ್ಯರ ಹೇಳಿಕೆಗಳನ್ನು ಕೆಲ ಮಾಧ್ಯಮಗಳು ವೈಭವೀಕರಿಸುತ್ತಿರುವುದನ್ನೂ ಗಮನಿಸಿದ್ದೇನೆ. ಈಗಾಗಲೇ ಮಾನಹಾನಿ ಪ್ರಕರಣದ ಜೊತೆಗೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಮುಂದಾಗಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜಕಾರಣ ಮಾಡಬೇಕು. ಇಲ್ಲದಿದ್ದರೇ ನವೆಂಬರ್ ೬ರಂದು ಸಿಡಿ ಬಿಡುಗಡೆ ಮಾಡುವುದು ಗ್ಯಾರೆಂಟಿ ಎಂದು ವಿಜಯಪುರ ಎಸ್‌ಎಸ್ ಖಾದ್ರಿ ಮತ್ತು ಮುಸ್ಲಿಂ ಮುಖಂಡರು ಎಚ್ಚರಿಕೆ ನೀಡಿದ್ದರು.

Next Article