ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ʻಹವಾ ಮೆಂಟೇನ್‌ʼಗೆ ನಕಲಿ ಐಬಿ ವೇಷ: ಬಂಧನ

10:52 PM May 24, 2024 IST | Samyukta Karnataka

ರಬಕವಿ-ಬನಹಟ್ಟಿ: ಮನೆಯವರ ಎದುರು ತಾನು ಉನ್ನತ ಸರ್ಕಾರಿ ಅಧಿಕಾರಿ ಎಂದು ಪೋಸ್ ಕೊಡುವ ಉದ್ದೇಶದಿಂದ ಇಂಟಲಿಜೆನ್ಸ್ ಬ್ಯೂರೋ ಅಧಿಕಾರಿ ಎಂದು ನಕಲಿ ಐಡಿ ಕಾರ್ಡ್ ಮಾಡಿಕೊಂಡು ಊರು ಸುತ್ತುತ್ತಿದ್ದ ವ್ಯಕ್ತಿಯೊಬ್ಬ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದ ಸಂಗಮೇಶ ಲಕ್ಕಪ್ಪಗೋಳ(೨೨) ಸಿಕ್ಕಿಬಿದ್ದಿರುವ ನಕಲಿ ಅಧಿಕಾರಿ. ಮೂಲತಃ ಹಿಪ್ಪರಗಿ ಗ್ರಾಮದ ಈತ ಐಬಿ ನಕಲಿ ಕಾರ್ಡ್, ಕ್ಯಾಪ್ ಹೊಂದಿದ್ದ. ಜತೆಗೆ ಬೈಕ್ ಮೇಲೂ ಐಬಿ ಲೇಗೋ ಹಾಕಿಕೊಂಡು ಸುತ್ತುತ್ತಿದ್ದ. ನಕಲಿ ಗನ್(ಲೈಟರ್), ಕೆಟ್ಟ ವಾಕಿಟಾಕಿದೊಂದಿಗೂ ಪೋಸ್ ನೀಡಿದ್ದ. ಈ ವಿಚಾರ ಮೇಲಧಿಕಾರಿಗಳಿಗೆ ತಿಳಿಯುತ್ತಿದ್ದಂತೆ ಪೊಲೀಸರು ಈತನಿಗಾಗಿ ಜಾಲ ಬೀಸಿದ್ದರು. ಬನಹಟ್ಟಿಯ ಬಿದರಿ ಸಮುದಾಯ ಭವನ ಹತ್ತಿರದ ಚೆಕ್‌ಪೋಸ್ಟ್ನಲ್ಲಿ ಪೊಲೀಸರಿಗೆ ಸಂಗಮೇಶ ತನ್ನ ನಕಲಿ ಐಡಿ ಕಾರ್ಡ್ ತೋರಿಸಿದ್ದಾನೆ. ತಕ್ಷಣವೇ ಸಂಶಯಗೊಂಡ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಸಿಕ್ಕಿಬಿದ್ದಿದ್ದಾನೆ.
ಊರಲ್ಲಿ ಗೌರವ ಸಿಗಲಿ ಹಾಗೂ ಮನೆಯಲ್ಲಿ ಪದೇ ಪದೇ ಯಾವುದಾದರೂ ನೌಕರಿಗೆ ಸೇರೆಂದು ಒತ್ತಾಯ ಮಾಡುತ್ತಿದ್ದುದ್ದಕ್ಕೆ ಈ ವೇಷ ಹಾಕಿದ್ದೇನೆಂದು ಆರೋಪಿ ಪೊಲೀಸರ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾನೆ. ಪ್ರಾಥಮಿಕ ವರದಿ ಪ್ರಕಾರ ಈತನ ಮೇಲೆ ಯಾವುದೇ ಪ್ರಕರಣವಿಲ್ಲ.

Next Article