ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅತಿಥಿ ಉಪನ್ಯಾಸಕರಿಗೆ ಗುಡ್‌ ನ್ಯೂಸ್

07:19 PM Jan 06, 2024 IST | Samyukta Karnataka

ಬೆಂಗಳೂರು: ಉಪನ್ಯಾಸಕರ ನೆರವಿಗೆ ನಿಲ್ಲುವ ಉದ್ದೇಶದಿಂದ ಹಲವು ಮಹತ್ವದ ನಿರ್ಣಯಗಳನ್ನು ಸರ್ಕಾರ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು "ಉನ್ನತ ಶಿಕ್ಷಣ ಸಚಿವರಾದ ಡಾ||ಎಂ.ಸಿ.ಸುಧಾಕರ್ ಮತ್ತು‌ ಮಾಜಿ MLC ಪುಟ್ಟಣ್ಣನವರ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಚರ್ಚಿಸಿ, ಅತಿಥಿ ಉಪನ್ಯಾಸಕರ ನೆರವಿಗೆ ನಿಲ್ಲುವ ಉದ್ದೇಶದಿಂದ ಹಲವು ಮಹತ್ವದ ನಿರ್ಣಯಗಳನ್ನು ನಮ್ಮ‌ ಸರ್ಕಾರ ತೆಗೆದುಕೊಂಡಿದೆ.
ನಾವು ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದ್ದೇವೆ. ಅವರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡುವ ಜೊತೆಗೆ ಕೆಲವು ಹೊಸ ಸೌಲಭ್ಯಗಳನ್ನು ನೀಡಲಾಗುವುದು.
ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ನಾನು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದೆ. ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ಗೌರವಧನ ಹೆಚ್ಚಳಕ್ಕೆ ಮುಂದಾಗಿದೆ.
ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ.
ಇದರ ಜೊತೆ ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ. ಗಳ ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ಮೀರಿದ ನಂತರದಲ್ಲಿ ಭದ್ರತಾ ರೂಪದಲ್ಲಿ ಗರಿಷ್ಠ 5 ಲಕ್ಷ ರೂ. ಇಡಿಗಂಟು ನೀಡುವುದು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವುದು ಹಾಗೂ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲಾಗುವುದು.
ನೇಮಕಾತಿಯಲ್ಲಿ ಅತಿಥಿ ಉಪನ್ಯಾಸಕರ ಸೇವಾನುಭವ ಆಧರಿಸಿ, ವೆಯ್ಟೇಜ್‌ ನೀಡುವುದು, ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಕಾರ್ಯಭಾರವಿದ್ದಲ್ಲಿ ನಂತರದ ವರ್ಷವೂ ಅಲ್ಲಿಯೇ ಅವರ ಸೇವೆಯನ್ನು ಮುಂದುವರೆಸುವುದು ಸೇರಿದಂತೆ ಕೌನ್ಸೆಲಿಂಗ್‌ ಪ್ರಕ್ರಿಯೆ ಸರಳೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ. ಸರ್ಕಾರ ಅತಿಥಿ ಉಪನ್ಯಾಸಕರ ಜೊತೆ ಇದೆ, ಕೂಡಲೇ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದು ಕರ್ತವ್ಯಕ್ಕೆ ಹಾಜರಾಗುವಂತೆ ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರಲ್ಲಿ ಮನವಿ ಮಾಡುತ್ತೇನೆʼ ಎಂದಿದ್ದಾರೆ.

Next Article