ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅಯೋಧ್ಯೆ ರಾಮಮೂರ್ತಿಯ ಮೇಲೆ ಸೂರ್ಯರಶ್ಮಿ

12:03 PM Apr 15, 2024 IST | Samyukta Karnataka

ಅಯೋಧ್ಯೆ: ರಾಮಮಂದಿರದಲ್ಲಿ ಏ.17ರ ರಾಮನವಮಿ ದಿನ ಬಾಲರಾಮನ ಮೂರ್ತಿಯ ಮೇಲೆ ಸೂರ್ಯರಶ್ಮಿಯ ಕಿರಣ ಬೀಳುವ ಪ್ರಯೋಗವನ್ನು ರೂರ್ಕಿಯ ಕೇಂದ್ರೀಯ ಕಟ್ಟಡ ಸಂಶೋಧನಾ ಸಂಸ್ಥೆಯ ತಜ್ಞರ ಸಮ್ಮುಖದಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ ಎಂದು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ತಿಳಿಸಿದೆ. ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್ ಆಫ್‌ ಆಸ್ಟ್ರೋಫಿಸಿಕ್ಸ್‌ ತಜ್ಞರು ಈ ತಂತ್ರಜ್ಞಾನ ಸಿದ್ಧಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಏ.17ರ ರಾಮನವಮಿಯಂದು ಸಹ ಬಾಲರಾಮನ ಮೂರ್ತಿಯ ಮೇಲೆ ಮೂರು ಕನ್ನಡಿಗಳ ಸಹಾಯದಿಂದ ಎರಡೂವರೆ ನಿಮಿಷಗಳ ಕಾಲ ಸೂರ್ಯರಶ್ಮಿ ಬೀಳಲಿದೆ. ಅದನ್ನು ದೂರದರ್ಶನ ನೇರಪ್ರಸಾರ ಮಾಡಲಿದ್ದು, ಜಗತ್ತಿನಾದ್ಯಂತ ಜನರು ಈ ತಂತ್ರಜ್ಞಾನ ಕೌತುಕವನ್ನು ಕಣ್ತುಂಬಿಕೊಳ್ಳಬಹುದಾಗಿದೆ ಎಂದು ಟ್ರಸ್ಟ್‌ ಪ್ರಕಟಿಸಿದೆ.

Next Article