ಆರ್ಟಿಇ ಅರ್ಜಿ ಸಲ್ಲಿಕೆ ಮೇ ೨೦ರವರೆಗೆ ವಿಸ್ತರಣೆ
ಬೆಂಗಳೂರು: ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಅಡಿ ವಿದ್ಯಾರ್ಥಿಗಳ ದಾಖಲಾತಿಗೆ ಅರ್ಜಿ ಸಲ್ಲಿಕೆಯ ದಿನವನ್ನು ಮೇ ೨೦ರವರೆಗೆ ವಿಸ್ತರಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಹಿಂದೆ ಏಪ್ರಿಲ್ ೨೨ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಈಗ ಅದನ್ನು ಮೇ ೨೦ರವರೆಗೆ ವಿಸ್ತರಿಸಲಾಗಿದೆ. ಮೇ ೩೦ರವರೆಗೆ ಅರ್ಜಿಗಳ ಪರಿಶೀಲನೆ ನಡೆಯಲಿದೆ. ಜೂ. ೧ರಂದು ಲಾಟರಿ ಪ್ರಕ್ರಿಯೆಗೆ ಅರ್ಹವಾದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ಜೂ. ೫ರಂದು ಆನ್ಲೈನ್ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ನಡೆಸಲಾಗುವುದು ಜೂ. ೬ರಿಂದ ಶಾಲೆಗಳಲ್ಲಿ ಆರ್ಟಿಇ ಅಡಿ ವಿದ್ಯಾರ್ಥಿಗಳ ದಾಖಲಾತಿ ಆರಂಭಗೊಳ್ಳಲಿದೆ ಎಂದು ಆದೇಶದಲ್ಲಿ ತಿಳಿಸಿದೆ. ಜೂನ್ ೬ರಿಂದ ೧೪ರ ವರೆಗೆ ಶಾಲೆಗಳಲ್ಲಿ ದಾಖಲಾದ ಮೊದಲ ಸುತ್ತಿನ ಮಕ್ಕಳ ವಿವರಗಳನ್ನು ತಂತ್ರಾಂಶದಲ್ಲಿ ಅಪ್ಲೋಡ್ ಮಾಡಲಾಗುವುದು. ಜೂನ್ ೧೯ರಂದು ಆನ್ಲೈನ್ ತಂತ್ರಾಂಶದ ಮೂಲಕ ಎರಡನೇ ಸುತ್ತಿನ ಸೀಟು ಹಂಚಿಕೆ ಮಾಡಲಾಗುತ್ತದೆ. ಜೂನ್ ೨೦ ರಿಂದ ೨೭ರ ವರೆಗೆ ಎರಡನೇ ಸುತ್ತಿನಲ್ಲಿ ಹಂಚಿಕೆಯಾದ ಸೀಟುಗಳಿಗೆ ಶಾಲೆಗಳಲ್ಲಿ ದಾಖಲಾತಿ ಮಾಡಿಕೊಳ್ಳಲಾಗುತ್ತದೆ. ಜೂನ್ ೨೮ರ ವರೆಗೆ ಶಾಲೆಗಳಲ್ಲಿ ದಾಖಲಾದ ಎರಡನೇ ಸುತ್ತಿನ ಮಕ್ಕಳ ವಿವರಗಳನ್ನು ತಂತ್ರಾಂಶದಲ್ಲಿ ಅಳವಡಿಸಲಾಗುತ್ತದೆ ಎಂದು ಇಲಾಖೆ ಮಾಹಿತಿ ನೀಡಿದೆ.