ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಇಂದು ಮೊದಲ ಮತದಾನ

01:12 AM Apr 26, 2024 IST | Samyukta Karnataka

ಬೆಂಗಳೂರು: ರಾಜ್ಯದ ೧೪ ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ಮತದಾನ ಬೆಳಗ್ಗೆ ೭ ರಿಂದ ಸಂಜೆ ೬ ಗಂಟೆವರೆಗೆ ನಡೆಯಲಿದೆ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಮೈಸೂರು ರಾಜವಂಶಸ್ಥ ಯದುವೀರ ಒಡೆಯರ್, ಡಿ.ಕೆ. ಸುರೇಶ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಒಟ್ಟು ೨೪೭ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.
೧೪ ಕ್ಷೇತ್ರಗಳಲ್ಲಿ ೩೦,೪೦೨ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು ೨,೮೮,೧೯,೩೪೨ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಇದರಲ್ಲಿ ೧,೪೪,೨೮,೦೯೯ ಪುರುಷರು ಹಾಗೂ ೧,೪೩,೮೮,೧೭೬ ಮಹಿಳೆಯರ ಜೊತೆಗೆ ೩೦೬೭ ತೃತೀಯ ಲಿಂಗಿಗಳಿದ್ದಾರೆ. ಮತದಾನ ಪ್ರಕ್ರಿಯೆ ಸುಗಮವಾಗಿ ನಡೆಸುವ ಸಲುವಾಗಿಯೇ ಸುಮಾರು ೧.೪೦ ಲಕ್ಷ ಸಿಬ್ಬಂದಿಗಳನ್ನು ಚುನಾವಣಾ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ.
ಭದ್ರತೆಗೆ ೫೦ ಸಾವಿರ ಪೊಲೀಸ್: ಮತದಾನದ ವೇಳೆ ಯಾವುದೇ ಅಹಿತಕರ ಘಟನೆಗಳಿಗೆ ಆವಕಾಶವಾ­ಗ­ದಂತೆ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ಬಂದೋಬಸ್ತ್ಗಾಗಿ ಸುಮಾರು ೫೦ ಸಾವಿರ ಪೊಲೀಸ್ ಸಿಬ್ಬಂದಿ ಹಾಗೂ ೬೫ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಮತದಾನ ನಡೆಯಲಿರುವ ಮತಗಟ್ಟೆಗಳ ಪೈಕಿ ೧೯,೭೦೧ ಮತಗಟ್ಟೆಗಳಲ್ಲಿ ವೆಬ್‌ಕ್ಯಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ೧೩೭೦ ಬೂತ್‌ಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಸೂಕ್ಷ÷್ಮ ಹಾಗೂ ಅತಿಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ.
ಅಖಾಡದಲ್ಲಿ ೨೪೭ ಅಭ್ಯರ್ಥಿಗಳು: ಶುಕ್ರವಾರ ಮತದಾನ ನಡೆಯಲಿರುವ ೧೪ ಕ್ಷೇತ್ರಗಳಲ್ಲಿ ಒಟ್ಟು ೨೪೭ ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಇದರಲ್ಲಿ ೨೨೬ ಪುರುಷರು ಹಾಗೂ ೨೧ ಮಹಿಳಾ ಅಭ್ಯರ್ಥಿಗಳಿದ್ದಾರೆ. ಕಾಂಗ್ರೆಸ್ ಎಲ್ಲಾ ೧೪ ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಮೈತ್ರಿ ಮಾಡಿಕೊಂಡಿರುವ ಬಿಜೆಪಿ ೧೧ ಹಾಗೂ ಜೆಡಿಎಸ್ ೩ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಅತಿಹೆಚ್ಚು ೨೯ ಅಭ್ಯರ್ಥಿಗಳಿದ್ದರೆ, ದಕ್ಷಿಣ ಕನ್ನಡದಲ್ಲಿ ಅತಿ ಕಡಿಮೆ ೯ ಅಭ್ಯರ್ಥಿಗಳಿದ್ದಾರೆ. ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಹಾಗೂ ಬಿಜೆಪಿ/ಜೆಡಿಎಸ್ ಮೈತ್ರಿಕೂಟದ ನಡುವೆ ನೇರ ಸ್ಪರ್ಧೆ ಹಣಾಹಣಿ ಏರ್ಪಟ್ಟಿದೆ.

ಘಟಾನುಘಟಿ ಅಭ್ಯರ್ಥಿಗಳಿವರು
ಮಂಡ್ಯ ಕ್ಷೇತ್ರದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಮೈಸೂರಿ­ ನಿಂದ ರಾಜವಂಶಸ್ಥ ಯದುವೀರ ಒಡೆಯರ್, ತುಮಕೂರಿನಿಂದ ಮಾಜಿ ಸಚಿವ ವಿ.ಸೋಮಣ್ಣ, ಮುದ್ದಹನುಮೇಗೌಡ, ಬೆಂಗಳೂರು ಉತ್ತರದಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಡಿಸಿಎಂ ಡಿ.ಕೆ. ಶಿವಕುಮಾರ್ ಸಹೋದರ ಡಿ.ಕೆ. ಸುರೇಶ್, ಖ್ಯಾತ ಹೃದಯತಜ್ಞ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಅಳಿಯ ಡಾ. ಮಂಜುನಾಥ್, ಹಾಸನದಿಂದ ಪ್ರಜ್ವಲ್ ರೇವಣ್ಣ, ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾರೆಡ್ಡಿ, ತೇಜಸ್ವಿಸೂರ್ಯ, ಮಂಡ್ಯದಿಂದ ಸ್ಟಾರ್‌ಚಂದ್ರು, ಚಿತ್ರದುರ್ಗದಿಂದ ಗೋವಿಂದ ಕಾರಜೋಳ, ಬಿ.ಎನ್. ಚಂದ್ರಪ್ಪ, ಉಡುಪಿ-ಚಿಕ್ಕಮಗಳೂರಿನಿಂದ ಜಯಪ್ರಕಾಶ್‌ಹೆಗಡೆ, ಕೋಟ ಶ್ರೀನಿವಾಸ ಪೂಜಾರಿ, ಬೆಂಗಳೂರು ಕೇಂದ್ರದಿಂದ ಪಿ.ಸಿ. ಮೋಹನ್, ಚಿಕ್ಕಬಳ್ಳಾಪುರದಿಂದ ಮಾಜಿ ಸಚಿವ ಡಾ.ಕೆ. ಸುಧಾಕರ್, ಕಾಂಗ್ರೆಸ್‌ನಿಂದ ರಕ್ಷಾ ರಾಮಯ್ಯ ಸೇರಿದಂತೆ ಹಲವು ಘಟಾನುಘಟಿ ನಾಯಕರುಗಳ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

Next Article