ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಇದ್ದೂ ಸತ್ತಂತಿದೆ ಸಿದ್ದು ಸರ್ಕಾರ

11:57 AM Apr 29, 2024 IST | Samyukta Karnataka

ಬಾಗಲಕೋಟೆ: ರಾಜ್ಯದಲ್ಲಿ ಭೀಕರ ಬರಬಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದರೂ ಸಿದ್ದರಾಮಯ್ಯ ಸರ್ಕಾರ ಜಾಣ ಕುರುಡುತನ ಪ್ರದರ್ಶಿಸುತ್ತಿದೆ. ಈ ಸರ್ಕಾರ ಇದ್ದೂ ಸತ್ತಂತೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಬಾಗಲಕೋಟೆಯಲ್ಲಿ ಬಿಜೆಪಿಯಿಂದ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಸಮಾವೇಶದಲ್ಲಿ ಅವರು ಮಾತನಾಡಿದರು.

ಹುಬ್ಬಳ್ಳಿ ನೇಹಾ ಹತ್ಯ ಪ್ರಕರಣವನ್ನು ಸಿಎಂ ಸಿದ್ದರಾಮಯ್ಯ ಅವರು ವೈಯಕ್ತಿಕ ಎಂದು ಹೇಳಿದರು, ಬೆಳಗಾವಿ ವಂಟಮೂರಿ ಘಟನೆಯಲ್ಲಿ ಕನಿಷ್ಠ ಸಂತ್ರಸ್ತೆಯನ್ನು ಭೆಟ್ಟಿ ಆಗಿ ಧೈರ್ಯ ತುಂಬವ ಕೆಲಸವನ್ನು ಈ ಸರ್ಕಾರ ಮಾಡಿಲ್ಲ .ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ರಕ್ಷಿಸುವ ಕೆಲಸ ಮಾಡಿದೆ ಎಂದು ಹರಿಹಾಯ್ದರು.

ರಾಜ್ಯದಲ್ಲಿ ಭೀಕರ ಬರ ಬಿದ್ದು ೯೦೦ ರೈತರು ಆತ್ಮಹತ್ಯೆ ಮಾಡಿಕೊಂಡರೂ ಸರ್ಕಾರ ರೈತರ ನೆರವಿಗೆ ಧಾವಿಸಿಲ್ಲ. ಹಿಂದೆ ಪ್ರವಾಹ ಉಂಟಾದಾಗ ಅಂದಿನ ಸಿ ಎಂ ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡಿದ್ದರು. ಈ ಸರ್ಕಾರ ರೈತರ ನೆರವಿಗೆ ಧಾವಿಸುತ್ತಿಲ್ಲ ಎಂದು ದೂರಿದರು.

Next Article