ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕರ್ನಾಟಕದಲ್ಲಿ ಹೆಣ್ಣು ಮಕ್ಕಳು ‘ಕೊಲೆ ಭಾಗ್ಯ’ ಕಾಣುವಂತಾಗಿದೆ

03:10 PM May 17, 2024 IST | Samyukta Karnataka

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ನಿಷ್ಕ್ರೀಯ ಆಡಳಿತದಿಂದ ದೇಶದಲ್ಲಿ ರಾಜ್ಯದ ಗೌರವ, ಘನತೆಗಳು ಕುಸಿದು ಬೀಳುತ್ತಿದೆ ಎಂದು ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಸಾಮಾಜಿಕ ಸುಭದ್ರತೆಗೆ ಹೆಸರಾಗಿದ್ದ ನಮ್ಮ ಹೆಮ್ಮೆಯ ಕರ್ನಾಟಕ ರಾಜ್ಯವನ್ನು ಕಾಂಗ್ರೆಸ್ ಸರ್ಕಾರ ತನ್ನ ಒಂದು ವರ್ಷದ ಆಡಳಿತದಲ್ಲಿ ಕ್ರಿಮಿನಲ್ ಗಳು, ಕೊಲೆಗಡುಕರ ತಾಣವನ್ನಾಗಿಸುತ್ತಿದೆ. ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳನ್ನು ಜಾರಿಗೆ ತಂದಿರುವುದಾಗಿ ಬೀಗುವ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಹಾಡುಹಗಲೇ ಅಮಾಯಕ ಹೆಣ್ಣು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈಯಲಾಗುತ್ತಿದೆ, ಮನೆಗಳಿಗೇ ನುಗ್ಗಿ ಗೃಹ ಲಕ್ಷ್ಮಿಯರನ್ನು ಚಾಕುವಿನಿಂದ ಇರಿದು ಕೊಲ್ಲಲಾಗುತ್ತಿದೆ, ಭಾಗ್ಯಲಕ್ಷ್ಮಿಯರನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಅರಣ್ಯರೋಧನವಾಗುತ್ತಿದೆ.

ರಾಜ್ಯಾದ್ಯಂತ ಹೆಣ್ಣು ಮಕ್ಕಳ ಸರಣೀ ಕೊಲೆಗಳು, ಅನುಮಾನದ ಸಾವುಗಳು, ಲೈಂಗಿಕ ದೌರ್ಜನ್ಯ ಪ್ರಕರಣಗಳೇ ಹೆಚ್ಚಾಗುತ್ತಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ. ಕೆಲ ದಿನಗಳ ಹಿಂದೆ ಹುಬ್ಬಳ್ಳಿಯ ನೇಹಾ, ಮಡಿಕೇರಿಯಲ್ಲಿ ಮೀನಾಳ ರುಂಡ ಕತ್ತರಿಸಿ ಕೊಲೆಗೈದ ಘಟನೆ, ಮತ್ತದೇ ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ, ಬೆಂಗಳೂರಿನ ಪದವಿ ವಿದ್ಯಾರ್ಥಿನಿಯ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿರುವುದೂ ಸೇರಿದಂತೆ ನಿರಂತರ ಕೊಲೆ ಪ್ರಕರಣಗಳು ವರದಿಯಾಗುತ್ತಲೇ ಇವೆ.

ಸದ್ಯದ ಪರಿಸ್ಥಿತಿಯಲ್ಲಿ ಮಹಿಳೆಯರು, ವಿದ್ಯಾರ್ಥಿನಿಯರು ಮನೆಯಿಂದ ಆಚೆ ಬರಲೂ ಭಯ ಪಡುವ ವಾತಾವರಣ ನಿರ್ಮಾಣಗೊಂಡಿದೆ. ದುಷ್ಟ ಹಂತಕರಿಗೆ ಯಾರ ಭಯವೂ ಇಲ್ಲದಂತಾಗಿದ್ದು ಕೊಲೆ, ದಾಂಧಲೆ, ದರೋಡೆ, ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದರೂ, ಸಾಮಾಜಿಕ ಭದ್ರತೆ ಕಲ್ಪಿಸಿ ಜನರಿಗೆ ಅಭಯ ತುಂಬಬೇಕಾದ ಗೃಹ ಇಲಾಖೆ ಈ ನಿಟ್ಟಿನಲ್ಲಿ ಯಾವುದೇ ಹೆಜ್ಜೆ ಇಡದೇ ನಾಗರಿಕ ಸಮಾಜದ ವಿಶ್ವಾಸ ಕಳೆದುಕೊಂಡಿದೆ.

ದುರ್ಬಲರು, ಅಬಲೆಯರು ಭರವಸೆ ಹೊತ್ತು ಧೈರ್ಯದಿಂದ ಪೊಲೀಸ್ ಠಾಣೆ ಮೆಟ್ಟಿಲೇರುವ ವಾತಾವರಣ ಕಲ್ಪಿಸಲಾಗದ ಕಾಂಗ್ರೆಸ್ ಸರ್ಕಾರದ ನಿಷ್ಕ್ರೀಯ ಆಡಳಿತದಿಂದ ದೇಶದಲ್ಲಿ ರಾಜ್ಯದ ಗೌರವ, ಘನತೆಗಳು ಕುಸಿದು ಬೀಳುತ್ತಿದೆ.

ಕಾನೂನು ಸುವ್ಯವಸ್ಥೆಯನ್ನು ಹತೋಟಿಗೆ ತರಲಾರದ ಸ್ಥಿತಿ ತಲುಪಿರುವ ಕಾಂಗ್ರೆಸ್ ಸರ್ಕಾರ ಅಸಮರ್ಥ ಗೃಹ ಸಚಿವರ ರಾಜೀನಾಮೆ ಪಡೆಯಲಿ, ಹಾಗೆಯೇ ಮುಖ್ಯಮಂತ್ರಿಗಳು ಸರಣೀ ಘಟನೆಗಳ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಒತ್ತಾಯಿಸುವೆ ಎಂದಿದ್ದಾರೆ.

Next Article