ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಾಂಗ್ರೆಸ್ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ದುರುದ್ದೇಶ

05:14 PM Mar 21, 2024 IST | Samyukta Karnataka

ಬೆಂಗಳೂರು: ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ. ಕಾನೂನು ಬಾಹಿರ ಈ ಕ್ರಮವನ್ನು ತಕ್ಷಣ ಹಿಂದಕ್ಕೆ ಪಡೆಯುವಂತೆ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ನಿರ್ದೆಶನ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶವಾಗಿದೆ. ನಮ್ಮ ಪಕ್ಷದ ಖಾತೆಯಲ್ಲಿರುವುದು ಪಕ್ಷದ ಅಭಿಮಾನಿಗಳಾದ ಸಾಮಾನ್ಯ ಜನರಿಂದ ಸಂಗ್ರಹವಾಗಿರುವ ಹಣ, ಅದರಲ್ಲಿರುವುದು ದೊಡ್ಡ ಉದ್ಯಮಪತಿಗಳದ್ದಲ್ಲ. ಹೀಗಿದ್ದರೂ ಯಾಕೆ ಇಂತಹ ಕ್ರಮ? ಎಂದು ಪ್ರಶ್ನಿಸಿದ್ದಾರೆ.
ಚುನಾವಣಾ ಬಾಂಡ್‌ಗಳ ಮೂಲಕ ಉದ್ಯಮಿಗಳಿಂದ ಸಾವಿರಾರು ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿ ತಮ್ಮ ಖಾತೆಗೆ ತುಂಬಿಸಿಕೊಂಡಿರುವ ಭಾರತೀಯ ಜನತಾ ಪಕ್ಷದ ಬಗ್ಗೆ ಚುನಾವಣಾ ಆಯೋಗ ಮೌನವಾಗಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಆಯೋಗ ತಕ್ಷಣ ಇದನ್ನು ಗಮನಿಸಿ ನಮ್ಮ ಪಕ್ಷಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯಲ್ಲಿ ಸೋಲಿನ ಭಯ ಹುಟ್ಟಿಕೊಂಡಿದೆ. ಸಾರ್ವಜನಿಕವಾಗಿ ಎದೆಯುಬ್ಬಿಸಿ ಏನೇ ಕೊಚ್ಚಿಕೊಂಡರೂ ಆಂತರ್ಯದಲ್ಲಿರುವ ಆತ್ಮಸಾಕ್ಷಿ ಸತ್ಯವನ್ನೇ ಹೇಳುತ್ತದೆ. 400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಾಯಲ್ಲಿ ಹೇಳಿಕೊಂಡರೂ ವಾಸ್ತವದ ಸ್ಥಿತಿ ಏನೆನ್ನುವುದು ನರೇಂದ್ರ ಮೋದಿಗೆ ಗೊತ್ತಿದೆ. ಈ ಭಯದ ಕಾರಣದಿಂದಲೇ ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸುವ ಸೇಡಿನ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿಯವರು ಒಂದು ಮುಖವಾಡ ಅಷ್ಟೆ, ಅದರ ಹಿಂದೆ ಸರ್ಕಾರವನ್ನು ಮನ್ನಡೆಸುವ ಒಂದು “ದುಷ್ಟ ಶಕ್ತಿ’’ ಇದೆ ಎಂದು ನಮ್ಮ ನಾಯಕರಾಗಿರುವ ರಾಹುಲ್ ಗಾಂಧಿಯವರು ಹೇಳಿರುವುದು ಸರಿಯಾಗಿದೆ. ಈ “ದುಷ್ಟ ಶಕ್ತಿ’’ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಲಯವನ್ನು ಕೂಡಾ ಬುಡಮೇಲು ಮಾಡಲು ಹೊರಟಿದೆ. ಇದನ್ನು ತಡೆಯುವ ಶಕ್ತಿ ಇರುವುದು ಚುನಾವಣೆಗೆ ಮಾತ್ರ.

Next Article