ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಆಯ್ಕೆ

07:35 PM Jun 08, 2024 IST | Samyukta Karnataka

ನವದೆಹಲಿ: ಸೋನಿಯಾ ಗಾಂಧಿ ಅವರನ್ನು ಸಂಸದೀಯ ಪಕ್ಷದ ಅಧ್ಯಕ್ಷೆಯನ್ನಾಗಿ ಮರು ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಹಳೆಯ ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ಕಾಂಗ್ರೆಸ್‌ ಸಂಸದೀಯ ಪಕ್ಷದ ಸಭೆ ನಡೆದಿದ್ದು, ಅಲ್ಲಿಯೇ ಅವಿರೋಧವಾಗಿ ಸೋನಿಯಾ ಗಾಂಧಿ ಅವರನ್ನು ಸಂಸದೀಯ ಪಕ್ಷದ ಅಧ್ಯಕ್ಷೆಯನ್ನಾಗಿ ಮರು ಆಯ್ಕೆ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಗಾಂಧಿ ಅವರ ಹೆಸರನ್ನು ಪ್ರಸ್ತಾಪ ಮಾಡಿದರು. ಪಕ್ಷದ ನಾಯಕರಾದ ಗೌರವ್‌ ಗೊಗೊಯ್‌, ತಾರಿಕ್‌ ಅನ್ವರ್‌, ಕೆ.ಸುಧಾಕರನ್‌ ಸೇರಿ ಹಲವು ನಾಯಕರು ಇದನ್ನೇ ಅನುಮೋದಿಸಿದರು.
ನೂತನವಾಗಿ ಸಂಸದರಾಗಿ ಆಯ್ಕೆಯಾದವರಿಗೆ ಅಭಿನಂದನೆ ಸಲ್ಲಿಸಿದ ಸೋನಿಯಾ ಗಾಂಧಿ, ಸವಾಲಿನ ಸಂದರ್ಭದಲ್ಲಿ ನೀವೆಲ್ಲ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದೀರಿ. ಚುನಾವಣೆ ಪ್ರಚಾರದ ವೇಳೆ ಎದುರಾದ ಸಂಕಷ್ಟಗಳನ್ನು ಮೆಟ್ಟಿ ನೀವು ಜಯ ತಂದಿದ್ದೀರಿ. ಇದು ಲೋಕಸಭೆಯಲ್ಲಿ ಕಾಂಗ್ರೆಸ್‌ ಪಕ್ಷವು ಇನ್ನಷ್ಟು ಪ್ರಬಲವಾಗಿ ಕೆಲಸ ಮಾಡಲು ಸಾಧ್ಯವಾಗಲಿದೆ. ಇನ್ನು ಪಕ್ಷದ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಕ್ಕೆ ಧನ್ಯವಾದಗಳು ಭಾರತ್ ಜೋಡೋ ಯಾತ್ರೆ ಮತ್ತು ಭಾರತ್ ಜೋಡೋ ನ್ಯಾಯ್ ಯಾತ್ರೆ ನಿಜವಾಗಿಯೂ ಐತಿಹಾಸಿಕ ಚಳವಳಿಗಳಾಗಿತ್ತು. ಈ ಎರಡು ಚಳವಳಿಯು ನಮ್ಮ ಪಕ್ಷವನ್ನು ಎಲ್ಲಾ ಹಂತಗಳಲ್ಲಿ ಪುನರುಜ್ಜೀವನಗೊಳಿಸಿತು. ಪ್ರಬಲ ಮತ್ತು ದುರುದ್ದೇಶಪೂರಿತ ತಂತ್ರದ ವಿರುದ್ಧವಾಗಿ ಕಾಂಗ್ರೆಸ್ ಮತ್ತೊಮ್ಮೆ ತನ್ನ ಛಲ ಪ್ರದರ್ಶಿಸಿದೆ ಎಂದು ಹೇಳಿದರು.

Next Article