ಕೆಲಸ ಕೊಡಿಸುವುದಾಗಿ ನಂಬಿಸಿ ವಿದೇಶಕ್ಕೆ ಕಳ್ಳಸಾಗಾಟ: ದೇಶಾದ್ಯಂತ NIA ರೇಡ್
11:34 AM May 28, 2024 IST | Samyukta Karnataka
ನವದೆಹಲಿ: ಮಾನವ ಕಳ್ಳಸಾಗಣೆ ಮತ್ತು ಸೈಬರ್ ವಂಚನೆ ಪ್ರಕರಣದಲ್ಲಿ ಒಟ್ಟು ಐವರನ್ನು ಬಂಧಿಸಿದ್ದಾರೆ.
ರಾಷ್ಟ್ರೀಯ ತನಿಖಾ ಸಂಸ್ಥೆ ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ದಾಳಿ ನಡೆಸಿದ್ದು, ಭಾರೀ ಮಾನವ ಕಳ್ಳಸಾಗಣೆ ಜಾಲವನ್ನು ಬೇಧಿಸಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಐವರನ್ನು ಅರೆಸ್ಟ್ ಮಾಡಿದ್ದಾರೆ. ಈ ಆರೋಪಿಗಳು ಕೆಲಸ ಕೊಡಿಸುವುದಾಗಿ ನಂಬಿಸಿ ಭಾರತೀಯ ಯುವಕರನ್ನು ವಿದೇಶಕ್ಕೆ ಕಳ್ಳಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ.ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರ, ಗುಜರಾತ್, ದೆಹಲಿ, ಹರಿಯಾಣ, ಪಂಜಾಬ್ ಮತ್ತು ಚಂಡೀಗಢದ 15 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿರುವುದಾಗಿ ಎನ್‌ಐಎ ತಿಳಿಸಿದೆ.