ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಜೀವ ಬೆದರಿಕೆ: ಶಾಸಕ ಬೆಲ್ಲದ ಸೇರಿ ಮೂವರ ವಿರುದ್ಧ ದೂರು

09:13 PM Jun 09, 2024 IST | Samyukta Karnataka

ಹುಬ್ಬಳ್ಳಿ: ಕೊಳಚೆ ನಿರ್ಮೂಲನ ಮಂಡಳಿ ನೀಡಿರುವ ಹಕ್ಕುಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅರವಿಂದ ಬೆಲ್ಲದ, ಉಪ ಮೇಯರ್ ಸತೀಶ ಹಾನಗಲ್ ಮತ್ತು ಲಕ್ಷ್ಮಣ ಭೋವಿ ಅವರ ವಿರುದ್ಧ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2023 ಡಿ. 30ರಂದು ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಕುಂದು ಕೊರತೆ ಸಭೆ ನಡೆದಿತ್ತು. ಅಂದು ಪರಶುರಾಮ ದಾವಣಗೆರೆ ಅವರು, ಆನಂದನಗರದ ಕೃಷ್ಣಾ ಲೊನಿಗೆ ಸಂಬಂಧಪಟ್ಟ ಖಾಲಿ ಜಾಗವನ್ನು ಕೊಳಚೆ ನಿರ್ಮೂಲನ ಮಂಡಳಿ ಅಕ್ರಮವಾಗಿ ಹಕ್ಕುಪತ್ರ ವಿತರಿಸಿದೆ ಎಂದು ದೂರಿ, ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ಹಿಂಪಡೆಯುವಂತೆ ಉಪ ಮೇಯರ್ ಮೇಯರ್ ಸತೀಶ ಹಾನಗಲ್ ಹಾಗೂ ಶಾಸಕ ಅರವಿಂದ ಬೆಲ್ಲದ ಅವರ ಕುಮ್ಮಕ್ಕಿನಿಂದ ಲಕ್ಷ್ಮಣ ಭೋವಿ ಅವರು ಅವಾಚ್ಯ ಪದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ. ಆರೋಪಿತರ ಮೇಲೆ ಕಾನೂನು ಕ್ರಮಕೈಗೊಳ್ಳಬೇಕು ಎಂದು ಅವರು ೪ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ದೂರು ದಾಖಲಿಸಿದ್ದರು. ನ್ಯಾಯಾಲವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Next Article