For the best experience, open
https://m.samyuktakarnataka.in
on your mobile browser.

ಡಿಕೆಶಿ ಹಣಿಯಲು ಸಿದ್ದು ಕಾನೂನು ತಂತ್ರ

01:13 PM Mar 23, 2024 IST | Samyukta Karnataka
ಡಿಕೆಶಿ ಹಣಿಯಲು ಸಿದ್ದು ಕಾನೂನು ತಂತ್ರ

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಕಾನೂನಾತ್ಮಕವಾಗಿ ಹಣೆಯುವ ತಂತ್ರ ರೂಪಿಸುತ್ತಿದ್ದಾರೆ. ಈ ಪ್ರಯತ್ನ ಸಫಲವಾಗಿರಲಿಕ್ಕಿಲ್ಲ. ಆದರೆ, ಪ್ರಯತ್ನ ನಿರಂತರವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಶನಿವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಯಾವುದೂ ಸರಿಯಾಗಿಲ್ಲ ಎಂದು ಸ್ವತಃ ಕಾಂಗ್ರೆಸ್ ಶಾಸಕ, ಸಚಿವರೇ ಬಹಿರಂಗವಾಗಿ ಅಸಮಾಧಾನ ತೋಡಿಕೊಳ್ಳುತತಿದ್ದಾರೆ. ಡಿ.ಕೆ. ಶಿವಕುಮಾರ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಿ, ಅವರನ್ನು ಕಾರ್ನರ್ ಮಾಡುವ ಪ್ರಯತ್ನ ಮೊದಲ ದಿನದಿಂದಲೇ ಜಾರಿಯಲ್ಲಿದೆ. ಹೀಗಾಗಿ ಇಬ್ಬರ ನಡುವಿನ ಗುದ್ದಾಟ ಗೌಪ್ಯವಾಗಿ ಉಳಿದಿಲ್ಲ. ಈ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಲೋಕಸಭೆ ಚುನಾವಣೆಯ ಬಳಿಕ ಗ್ಯಾರಂಟಿ ಸರ್ಕಾರದ ಅಸ್ತಿತ್ವಕ್ಕೇ ಗ್ಯಾರಂಟಿ ಇಲ್ಲದಾಗಿದೆ ಎಂದರು.
ಮಂಡ್ಯ ಸಂಸದೆ ಸುಮಲತಾ ಅವರ ಜೊತೆ ನಮ್ಮ ರಾಷ್ಟ್ರೀಯ ನಾಯಕರು ಮಾತನಾಡಿದ್ದಾರೆ. ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ. ಎರಡು ದಿನಗಳಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಹಾಸನದ ಪ್ರೀತಮಗೌಡ ಅವರು ಬೇಸರದಲ್ಲಿ ಮೈತ್ರಿ ಬಗ್ಗೆ ಅಪಸ್ವರ ಎತ್ತಿದ್ದಾರೆ. ರಾಷ್ಟ್ರೀಯ ಪ್ರಮುಖರು ಅವರ ಜೊತೆಗೆ ಮಾತನಾಡುತ್ತಾರೆ. ಬಿಜೆಪಿ ರಾಷ್ಟ್ರೀಯ ನಾಯಕರ ಮತ್ತು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಮಧ್ಯೆ ಮೈತ್ರಿ ಮಾತೂಕತೆ ನಡೆದುರುವುದರಿಂದ ನಾನು ಏನನ್ನೂ ಹೇಳಲಾರೆ. ಆ ಬಗ್ಗೆ ನಾಯಕರೇ ಮಾತನಾಡುತ್ತಾರೆ. ಅಲ್ಲಿಯ ವರೆಗೂ ಬಹಿರಂಗ ಹೇಳಿಕೆ ನೀಡದಂತೆ ಪ್ರೀತಮಗೌಡ ಅವರಿಗೆ ಮನವಿ ಮಾಡಿಕೊಳ್ಳುತ್ತೇನೆ. ಅಲ್ಲದೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿಯಾಗಿ ಭಾವನೆಗಳನು ಹೇಳಿಕೊಳ್ಳುವ ಸಲಹೆ ನೀಡುತ್ತೇನೆ ಎಂದರು.
ಬೆಳಗಾವಿ ಕ್ಷೇತ್ರಕ್ಕೆ ಜಗದೀಶ ಶೆಟ್ಟರ ಟಿಕೆಟ್ ವಿಚಾರವಾಗಿ ಮಾತನಾಡಿದ ಅವರು, ಶೆಟ್ಟರ ಹೆಸರು ಮುಂಚೂಣಿಯಲ್ಲಿದೆ. ಇನ್ನೆರಡು ದಿನಗಳಲಿ ಕಾಲ ಎಲ್ಲವೂ ಬಗೆ ಹರಿಯಲಿದ್ದು, ಪರ-ವಿರೋಧದ ಬಗ್ಗೆ ರಾಷ್ಟ್ರೀಯ ನಾಯಕರು ಚರ್ಚೆ ಮಾಡಿ ಸುಖಾಂತ್ಯ ಗೊಳಿಸಲಿದ್ದಾರೆ ಎಂದರು.