ಡಿ ಕೆ ಸುರೇಶ್ ನಾಮಪತ್ರ ಸಲ್ಲಿಕೆ
02:27 PM Mar 28, 2024 IST | Samyukta Karnataka
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ರಾಮನಗರ ಡಿಸಿ ಕಚೇರಿಯಲ್ಲಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.
ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು ಮೊದಲ ದಿನವೇ ಡಿಕೆ ಸುರೇಶ್ ನಾಪಮತ್ರ ಸಲ್ಲಿಸಿದ್ದಾರೆ. 2013ರ ಉಪ ಚುನಾವಣೆ ಸೇರಿ 3 ಬಾರಿ ಜಯಗಳಿಸಿರುವ ಡಿಕೆ ಸುರೇಶ್ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ಕಡೇ ದಿನವಾಗಿದೆ. ಏಪ್ರಿಲ್ 5ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 8 ನಾಮಪತ್ರ ವಾಪಸ್‌ಗೆ ಕಡೇ ದಿನವಾಗಿದೆ.
ನಾಮಪತ್ರ ಸಲ್ಲಿಕೆಗೂ ಮುನ್ನ ರಾಮನಗರದಲ್ಲಿ ನಡೆದ ಬೃಹತ್ ಮೆರವಣಿಗೆ