ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ತೆರಿಗೆ ಬಾಕಿ‌: ಬೆಂಗಳೂರಿನ ಮಂತ್ರಿ ಮಾಲ್‌ಗೆ ಬೀಗ

11:16 AM May 10, 2024 IST | Samyukta Karnataka

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ ಶಾಕ್ ನೀಡಿದೆ.
ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬಿಬಿಎಂಪಿ ಅಧಿಕಾರಿಗಳ ತಂಡ ಮಂತ್ರಿಮಾಲ್‌ಗೆ ಬೀಗ ಹಾಕಿದೆ. ಈ ಹಿಂದೆ ಕೂಡ ಹಲವು ಬಾರೀ ಪಾಲಿಕೆ ಬೀಗ ಹಾಕಿತ್ತು. ಎಷ್ಟೇ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದ ಮಾಲ್​ಗೆ ಬಿಬಿಎಂಪಿ ಅಧಿಕಾರಿಗಳು ಈ ಬಾರಿ ಬಿಸಿ ಮುಟ್ಟಿಸಿದ್ದಾರೆ. ತೆರಿಗೆ ಹಣ ಪಾವತಿಸದ ಹಿನ್ನೆಲೆಯಲ್ಲಿ ಮಂತ್ರಿ ಮಾಲ್ ಲೈಸನ್ಸ್ ರದ್ದುಪಡಿಸಲಾಗಿದೆ ಎಂದು ನೋಟಿಸ್ ಅಂಟಿಸಲಾಗಿದೆ.

Next Article