For the best experience, open
https://m.samyuktakarnataka.in
on your mobile browser.

ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ ಮೋದಿ

11:18 AM Apr 26, 2024 IST | Samyukta Karnataka
ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ ಮೋದಿ

ಬೆಂಗಳೂರು: ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಕನ್ನಡದಲ್ಲಿ ಪೋಸ್ಟ್‌ ಮಾಡಿರುವ ಅವರು ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ ಕೋರುತ್ತೇನೆ. ನಿಮ್ಮ ಮತ ನಿಮ್ಮ ಧ್ವನಿ! ಎಂದಿದ್ದಾರೆ.