For the best experience, open
https://m.samyuktakarnataka.in
on your mobile browser.

ದಿಂಗಾಲೇಶ್ವರ ಸ್ವಾಮೀಜಿ ದುಸ್ಸಾಹಸಕ್ಕೆ ಕೈ ಹಾಕಬಾರದು

12:13 PM Apr 15, 2024 IST | Samyukta Karnataka
ದಿಂಗಾಲೇಶ್ವರ ಸ್ವಾಮೀಜಿ ದುಸ್ಸಾಹಸಕ್ಕೆ ಕೈ ಹಾಕಬಾರದು

ಹುಬ್ಬಳ್ಳಿ: ಧಾರವಾಡ ಕ್ಷೇತ್ರದ ಮತದಾರರು ಪ್ರಹ್ಲಾದ ಜೋಶಿ ಅವರ ಪರವಾಗಿದ್ದಾರೆ. ದಿಂಗಾಲೇಶ್ವರ ಶ್ರೀಗಳು ಚುನಾವಣೆಗೆ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಇದೆ. ಪ್ರಹ್ಲಾದ್ ಜೋಶಿ ಅವರು ಪ್ರಭುದ್ಧ ರಾಜಕಾರಣಿ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅಭಿವೃದ್ಧಿ ಕಾರ್ಯಗಳೇ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದರು.

ಪ್ರಹ್ಲಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಸ್ವಾಮಿಜಿಗಳಿಗೆ ಮತ್ತೊಮ್ಮೆ ವಿನಂತಿ ಮಾಡುತ್ತೇನೆ. ತಮ್ಮ ನಿರ್ಧಾರದಿಂದ ಅವರು ಹಿಂದೆ ಸರಿಯಬೇಕು. ಈ ಕುರಿತು ಈಗಾಗಲೇ ಅವರೊಂದಿಗೆ ಮಾತನಾಡಿದ್ದೇನೆ. ಇನ್ನೊಮ್ಮೆ ಫೋನ್ ಕರೆ ಮೂಲಕ ಅವರನ್ನು ಮನವೊಲಿಸುವ ಕೆಲಸ ಮಾಡುವೆ ಎಂದರು.

ಪ್ರಹ್ಲಾದ್ ಜೋಶಿ ನಾಮಪತ್ರ ಹಿನ್ನೆಲೆಯಲ್ಲಿ ಸಿಟಿರವಿ, ಬೈರತಿ ಬಸವರಾಜ್, ಮಾಜಿ ಸಚಿವ ಶಂಕರಪಾಟೀಲ್ ಮುನೇನಕೊಪ್ಪ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ ಎಂದರು.