For the best experience, open
https://m.samyuktakarnataka.in
on your mobile browser.

ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅರ್ಜಿ

07:47 PM May 27, 2024 IST | Samyukta Karnataka
ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅರ್ಜಿ

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ ಆಗಮಿಸುವುದಾಗಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಬೆನ್ನಲ್ಲೇ ತಾಯಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಕೆ.ಆರ್‌. ನಗರದ ಸಂತ್ರಸ್ತೆಯೋರ್ವರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್‌ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಬಂಧನ ಭೀತಿ ಎದುರಾಗಿದೆ. ಸಂತ್ರಸ್ತೆ ತನ್ನ ಹೇಳಿಕೆಯಲ್ಲಿ ಭವಾನಿ ರೇವಣ್ಣರ ಹೆಸರು ಉಲ್ಲೇಖಿಸಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಭವಾನಿಗೆ ನೋಟಿಸ್ ನೀಡಿದ್ದರು. ಇದೀಗ ಬೆಂಗಳೂರಿನ ಸೆಷನ್ಸ್ ಕೋರ್ಟ್‌ನಲ್ಲಿ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿ ವಿಚಾರಣೆಯನ್ನು ಕೋರ್ಟ್ ನಾಳೆಗೆ ಮುಂದೂಡಿದೆ.