ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ

05:26 PM Jun 16, 2024 IST | Samyukta Karnataka

ವಿಜಯಪುರ: ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಸೇಡಿಗಾಗಿ ದರ ಏರಿಕೆ ಮಾಡಿದ್ದಾರೆ ಎಂಬ ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ವಿಜಯಪುರದಲ್ಲಿ ನಾವು ಸೋತಿದ್ದೇವೆ. ಕರ್ನಾಟಕದಲ್ಲಿ ನಾವು ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ. ವಿಜಯಪುರದಲ್ಲಿ ಗೆಲ್ಲುತ್ತೇವೆ ಎಂಬ ನಿರೀಕ್ಷೆಯಿತ್ತು. ಕರ್ನಾಟಕದಲ್ಲಿ ಕಳೆದ ಚುನಾವಣೆಗೆ ಹೋಲಿಕೆ ಮಾಡಿದರೆ, ಈ ಬಾರಿ ಒಂಬತ್ತು ಸ್ಥಾನಗಳನ್ನು ಗಳಿಸಿದ್ದೇವೆ. ಬಿಜೆಪಿ ಕಳೆದ ಬಾರಿ 25 ಇದ್ದನ್ನು ಈ ಬಾರಿ 19ಕ್ಕೆ ಇಳಿದಿದ್ದಾರೆ. ನಮಗೆ 13% ಮತ ಹಂಚಿಕೆಯಾಗಿದೆ. ನಾವು ಸೋತಿದ್ದೇವೆಯೇ ಎಂದು ಪ್ರಶ್ನಿಸಿದರು. ನಮ್ಮ ಲೆಕ್ಕಾಚಾರದ ಪ್ರಕಾರ, ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ ಅಷ್ಟೇ ಎಂದರು.
ಸೋತಿರುವುದು ಬಿಜೆಪಿ
ಚುನಾವಣೆಯಲ್ಲಿ ಸೋತಿರುವುದು ಬಿಜೆಪಿ. ಕಳೆದ ಬಾರಿ 303 ಸ್ಥಾನಗಳನ್ನು ಪಡೆದು ಈ ಬಾರಿ 240 ಸ್ಥಾನಗಳನ್ನು ಪಡೆದು ಬಿಜೆಪಿ ಸೋತಿದೆ ಎಂದರು. ಕಳೆದ ಬಾರಿ 31% ಈ ಬಾರಿ 41% ಮತ ಹಂಚಿಕೆಯಾಗಿದೆ. 15 ಸ್ಥಾನ ಬರಬಹುದೆಂಬ ನಿರೀಕ್ಷೆಯಿತ್ತು. ನಾವು ಸೋತಿದ್ದೇವೆಯೇ ಎಂದರು. ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಕಡಿಮೆ ಮತ ಬಂದಿದೆ, ಮೋದಿ ಅಲೆ ಕಡಿಮೆಯಾಗಿದೆ ಎಂದರು.
ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಕಡಿಮೆ ಇದೆ
ಪೆಟ್ರೋಲ್ ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. 11.4.2021ರಂದು ಪೆಟ್ರೋಲ್ ಮೇಲೆ 35% ತೆರಿಗೆ ಹಾಗೂ ಡೀಸೆಲ್ ಮೇಲೆ 24% ತೆರಿಗೆ ಹಾಕುತ್ತಿದ್ದರು. ನಂತರ ಕೇಂದ್ರದಲ್ಲಿ ಇಳಿಕೆ ಮಾಡಿದ್ದರಿಂದ ಇವರೂ 35 ರಿಂದ 25.92ಕ್ಕೆ ನಂತರ ಇಳಿಸಿದರು. ಡೀಸಲ್ ಮೇಲೆ 14.34ಕ್ಕೆ ಇಳಿಸಿದರು. ಶೇ. 7 ರೂಪಾಯಿಯಷ್ಟು ಕಡಿಮೆ ಮಾಡಿದರು. ಏಕೆಂದರೆ ಕೇರಳ ಆಗಲಿ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ, ತಮಿಳುನಾಡು ಕಡಿಮೆ ಮಾಡಲಿಲ್ಲ. ಈಗ ಕರ್ನಾಟಕದಲ್ಲಿ 99.85 ರೂ. ಪೆಟ್ರೋಲ್ ಬೆಲೆಯಿದೆ. ನಿನ್ನೆಯಿಂದ ಮೂರು ರೂಪಾಯಿ ಹೆಚ್ಚು ಮಾಡಿದ್ದೇವೆ. 102 ರೂ. ಗೆ ಹೆಚ್ಚಾಗಿದೆ. ಇದು ತಮಿಳುನಾಡಿಗೆ ಸಮವಾಗಿದೆ. ಕೇರಳದ ಕಾಸರಗೋಡಿನಲ್ಲಿ 106.66 ರೂ.ಗಳಿದೆ. ಆಂಧ್ರದ ಅನಂತಪುರದಲ್ಲಿ 109.44, ತೆಲಂಗಾಣದ ಹೈದರಾಬಾದ್ ನಲ್ಲಿ 107.40 ಹಾಗೂ ಮಹಾರಾಷ್ಟ್ರದಲ್ಲಿ 104.46 ರೂ.ಇದೆ. ಇವೆಲ್ಲಕ್ಕೆ ಹೋಲಿಸಿದರೆ ನಮ್ಮ ದರ ಕಡಿಮೆ ಇದೆ ಎಂದರು.
ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ ಕಡಿಮೆ ಇದೆ
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಕರ್ನಾಟಕದ ಇತಿಹಾಸದಲ್ಲಿ ಪೆಟ್ರೋಲ್ ಬೆಲೆ ಇಷ್ಟು ದುಬಾರಿಯಾಗಿರಲಿಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿ ಹಿಂದೆ ಇದ್ದಾಗ ಶೇ 35% ಇತ್ತು. ಬಿಜೆಪಿ ಸರ್ಕಾರ ಇರುವ ರಾಜಸ್ಥಾನದಲ್ಲಿ 104.86 ರೂ.ಗಳಿದೆ ಹಾಗೂ ಮಧ್ಯಪ್ರದೇಶದಲ್ಲಿ 106.47 ರೂ. ಗಳಿದೆ. ಕರ್ನಾಟದಲ್ಲಿ ಈ ರಾಜ್ಯಗಳಿಗಿಂತ ಕಡಿಮೆ ಇದೆ. ಪಕ್ಕದ ರಾಜ್ಯಗಳಿಗೆ ಸಮವಾಗಿರಲಿ ಎಂಬ ಕಾರಣಕ್ಕೆ ಬೆಲೆ ಏರಿಕೆ ಮಾಡಿರಲಿಲ್ಲ. ಚುನಾವಣೆಯ ನಂತರ ತಲೆಬದ್ಧಗೊಳಿಸಲು ಏರಿಕೆ ಮಾಡಿದ್ದೇವೆ. ಇತರೆ ರಾಜ್ಯಗಳಲ್ಲಿ ಇದಕ್ಕಿಂತ ಹೆಚ್ಚಿದೆ ಎಂದರು.

Next Article