ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪ್ರಚಾರಕ್ಕೆ ಎಲ್ಲ ಪಕ್ಷಗಳು ಸಜ್ಜು

10:44 PM Mar 31, 2024 IST | Samyukta Karnataka

ಬೆಂಗಳೂರು: ಲೋಕಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಪ್ರಚಾರದ ಭರಾಟೆಗೆ ಸಜ್ಜಾಗುತ್ತಿದ್ದು, ಅಬ್ಬರದ ಪ್ರಚಾರ, ಬೃಹತ್ ಮೆರವಣಿಗೆ, ರೋಡ್ ಶೋ, ರ‍್ಯಾಲಿ ನಡೆಸಲು ರಾಜಕೀಯ ಪಕ್ಷಗಳು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ.
ಈಗಾಗಲೇ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನದ ಜೊತೆಗೆ ಮಠ-ಮಂದಿರಗಳಿಗೆ ತೆರಳಿ ಮಠಾಧೀಶರ ಆಶೀರ್ವಾದ ಪಡೆದುಕೊಂಡು ಇನ್ನು ಕ್ಷೇತ್ರದೆಲ್ಲೆಡೆ ಪ್ರಚಾರಕ್ಕೆ ಅಣಿಯಾಗುತ್ತಿದ್ದಾರೆ.
ಕಾರ್ಯಕರ್ತರು, ಬೆಂಬಲಿಗರು ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮನೆಮನೆಗಳಿಗೆ ತೆರಳಿ ಕರಪತ್ರಗಳನ್ನು ಹಂಚುತ್ತಾ ಈಗಾಗಲೇ ಪ್ರಚಾರ ಶುರುವಿಟ್ಟುಕೊಂಡಿದ್ದಾರೆ. ನಗರ, ಪಟ್ಟಣ ಪ್ರದೇಶಗಳಲ್ಲಿ ಬೆಳ್ಳಂಬೆಳಿಗ್ಗೆ ಪಾರ್ಕು, ಬಸ್‌ನಿಲ್ದಾಣ, ಹೋಟೆಲ್ ಮುಂತಾದ ಕಡೆ ಅಭ್ಯರ್ಥಿಗಳು ತೆರಳಿ ಅಲ್ಲಿಗೆ ಭೇಟಿ ನೀಡುವ ಜನರೊಂದಿಗೆ ಬೆರೆತು ಮಾತುಕತೆ ನಡೆಸುವ ಮೂಲಕ ಮತಯಾಚನೆ ಮಾಡುತ್ತಿದ್ದರೆ, ತಾಲೂಕು, ಹೋಬಳಿ, ಗ್ರಾಮಮಟ್ಟದಲ್ಲಿ ವಿವಿಧ ಸಮುದಾಯಗಳ ಮುಖಂಡರುಗಳ ಭೇಟಿ ಮಾಡಿ ಸಮಾಲೋಚನೆ ನಡೆಸುತ್ತಿದ್ದಾರೆ. ಗ್ರಾಮ
ಗ್ರಾಮಗಳಲ್ಲಿ ಇರುವ ದೇವಾಲಯಗಳಿಗೆ ಭೇಟಿ ನೀಡಿ ಅಲ್ಲಿನ ದೇವಸ್ಥಾನಗಳ ಅಭಿವೃದ್ಧಿಗೆ ಭರವಸೆ, ಆರ್ಥಿಕ ಸಹಾಯ ನೀಡುತ್ತಿರುವುದು ಕಂಡುಬರುತ್ತಿದೆ.
ನೇರವಾಗಿ ಹಣ ನೀಡಿದರೆ ಆಯೋಗದ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ಗ್ರಾಮಗಳ ದೇವಸ್ಥಾನದ ಅಭಿವೃದ್ಧಿ ನೆಪದಲ್ಲಿ ಆರ್ಥಿಕ ನೆರವನ್ನು ಅಭ್ಯರ್ಥಿಗಳು ನೀಡುವ ಮೂಲಕ ಮತಗಳನ್ನು ಸೆಳೆಯುವ ಹಳೆಯ ತಂತ್ರ ಅನುಸರಿಸುತ್ತಿದ್ದಾರೆ. ಮಹಿಳಾ ಸಂಘಟನೆ, ಸ್ತ್ರೀ ಶಕ್ತಿ ಸಂಘ, ಸ್ವಸಹಾಯ ಸಂಘಗಳ ಮುಖಂಡರೊಂದಿಗೆ ಚರ್ಚೆ ನಡೆಸಿ, ಬೆಂಬಲ ನೀಡುವಂತೆ ಮನವಿ ಮಾಡುತ್ತಿದ್ದಾರೆ.

Next Article