ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬರ ಪರಿಹಾರ: ಕೇಂದ್ರ ಸರ್ಕಾರದ ಕಳಕಳಿ ತೋರಿಸುತ್ತದೆ

12:05 PM Apr 27, 2024 IST | Samyukta Karnataka

ಬೆಂಗಳೂರು: ಸಂಕಷ್ಟ ಕಾಲದಲ್ಲಿ ಕರ್ನಾಟಕದ ಜನರ ಪರವಾಗಿ ತೀರ್ಮಾನ ತೆಗೆದುಕೊಂಡಿರುವುದು ಕೇಂದ್ರ ಸರ್ಕಾರದ ಕಳಕಳಿ ತೋರಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ರಾಜ್ಯದಲ್ಲಿ ತೀವ್ರ ಬರ ಇದ್ದರೂ ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡಿ ತಡವಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದರೂ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಅನುಮತಿ ಪಡೆದು ಸಂಕಷ್ಟ್‌ ಕಾಲದಲ್ಲೂ ಕರ್ನಾಟಕದ ಜನರ ಪರವಾಗಿ ತೀರ್ಮಾನ ತೆಗೆದುಕೊಂಡಿರುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ಕಳಕಳಿ ತೋರಿಸುತ್ತದೆ.
ರಾಜ್ಯ ಸರ್ಕಾರ ನಿರಂತರವಾಗಿ ಈ ಬಗ್ಗೆ ಅಪಪ್ರಚಾರ ಮಾಡದೇ ಆರು ತಿಗಳ ಹಿಂದೆಯೇ ರೈತರಿಗೆ ಪರಿಹಾರ ಒದಗಿಸಿದ್ದರೆ ರೈತರ ಬದುಕು ಸ್ವಲ್ಪನಾದರು ಸುಧಾರಿಸುತ್ತಿತ್ತು. ಆದರೆ, ಅದನ್ನು ರಾಜ್ಯ ಸರ್ಕಾರ ಮಾಡದಿರುವುದು ವಿಷಾದನೀಯ. ಈ ಸಂಕಷ್ಟದ ಕಾಲದಲ್ಲಿ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುವ ತೀರ್ಮಾನ ತೆಗೆದುಕೊಂಡಿವುದು ಅತ್ಯಂತ ಸ್ವಾಗತಾರ್ಹ.

Next Article