For the best experience, open
https://m.samyuktakarnataka.in
on your mobile browser.

ಬಾಂಬ್ ಪ್ರಕರಣದ ಆರೋಪಿಯ ಸುಳಿವು

04:33 PM Mar 07, 2024 IST | Samyukta Karnataka
ಬಾಂಬ್ ಪ್ರಕರಣದ ಆರೋಪಿಯ ಸುಳಿವು

ಬೀದರ್ : ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿಯ ಬಂಧನಕ್ಕೆ ಎನ್.ಐ.ಎ ಹಾಗೂ ಸಿಸಿಬಿ ಪೊಲೀಸರು ಹುಡುಕಾಟ ಕೈಗೊಂಡಿದ್ದಾರೆ. ಸುಳಿವುಗಳು ದೊರೆತಿದ್ದು, ತನಿಖೆ ಜಾರಿಯಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದರು.
ಇಲ್ಲಿ ಗುರುವಾರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿದರು. ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೊಂದು ಎರಡ್ಮೂರು ದಿನಗಳಲ್ಲಿ ಸಿದ್ಧವಾಗಲಿದೆ. ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿಷಯ ಚರ್ಚೆ ಆಗಬಹುದು ಎಂದು ತಿಳಿಸಿದರು. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪದ ಬಾಕಿ ಇರುವ ಕಾಮಗಾರಿಗಳ ಬಿಲ್ಲುಗಳ ಪಾವತಿಗಾಗಿ ೫೦ ಕೋಟಿ ರೂ.ಗಳನ್ನು ಜಿಲ್ಲಾಧಿಕಾರಿಗಳಿಗೆ ಒದಗಿಸಲಾಗಿದೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ ಒದಗಿಸಲಾಗುವುದು ಎಂದರು. ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಹೇಳಿಕೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ ಮಾತನ್ನು ಪುನರುಚ್ಛರಿಸಿದ್ದಾರೆ ಎಂದು ಸಿಎಂ ತಿಳಿಸಿದರು.