ಬೆಂಗಳೂರಲ್ಲಿ ಕಮಾಂಡ್ ಸೆಂಟರ್
ಬೆಂಗಳೂರು: ಅಪರಾಧಗಳು ನಡೆಯದ ರೀತಿ ತಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರ ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿರುವ ಅವರು "ಬೆಂಗಳೂರಿನಲ್ಲಿ ಸರಗಳ್ಳತನ ಹಾಗೂ ಮಹಿಳೆಯರ ಮೇಲೆನ ದೌರ್ಜನ್ಯ ಹೆಚ್ಚಾಗಿದೆ ಹಾಗೂ ಕೊಲೆಗಳೂ ಕೂಡ ನಡೆಯುತ್ತಿವೆ. ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಿರ್ಭಯಾ ನಿಧಿಯಡಿ "ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್" ಕಟ್ಟಡ ನಿರ್ಮಾಣವಾಗಿದೆ. ಹೆಚ್ಚೆಚ್ಚು ಇದರ ಸದುಪಯೋಗವಾಗುವಂತಾಗಬೇಕು.
ಇಂಥ ಸೌಲಭ್ಯಗಳು ಜನರಿಗೆ ತಲುಪಿದಾಗ, ಉಪಯೋಗಕ್ಕೆ ಬಂದಾಗ ಮಾತ್ರ ಸಾರ್ಥಕವಾಗುತ್ತದೆ. ರೂ.668 ಕೋಟಿ ವೆಚ್ಚದಲ್ಲಿ ಕಮಾಂಡ್ ಸೆಂಟರ್ ನಿರ್ಮಾಣವಾಗಿದೆ. ನಿರೀಕ್ಷಿತ ಫಲ ಸಿಕ್ಕದೇ ಹೋದರೆ ಕಷ್ಟ. ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ, ಮಹಿಳೆಯರ ಮೇಲೆ ದೌರ್ಜನ್ಯ, ಒಂಟಿ ಮನೆಗಳಿರುವಲ್ಲಿ, ವೃದ್ಧರು ಒಂಟಿಯಾಗಿರುವಲ್ಲಿ ಹೆಚ್ಚಿನ ಗಮನ ನೀಡಬೇಕು. ಅಪರಾಧವಾದ ನಂತರ ಶಿಕ್ಷೆ ಕೊಡುವುದು ಒಂದು ಭಾಗ. ಆದರೆ ಅಪರಾಧಗಳು ನಡೆಯದ ರೀತಿ ತಡೆಯಬೇಕು. ಮಹಿಳೆಯರಿಗೆ ರಕ್ಷಣೆ ನೀಡುವ ಕೆಲಸ ಮಾಡಬೇಕು. ಪೋಲಿಸರು ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ಬೆಂಗಳೂರು ನಗರದಲ್ಲಿ ಮೊದಲ ಬಾರಿ ಕಮಾಂಡ್ ಸೆಂಟರ್ ಸ್ತಾಪನೆಯಾಗಿದ್ದು, ಅವಶ್ಯಕತೆ ಇರುವವರಿಗೆ ಇದರ ಪ್ರಯೋಜನ ದೊರಕಲಿ.
ಅತ್ಯಾಧುನಿಕ ಉಪಕರಣಗಳನ್ನು ಕೇಂದ್ರದಲ್ಲಿ ಅಳವಡಿಸಲಾಗಿದ್ದು ಇವೆಲ್ಲವೂ ಉಪಯೋಗವಾಗಬೇಕು . ಹಾಗಾದಾರೆ ಕಮಾಂಡ್ ಸೆಂಟರ್‌ನಿಂದ ಬೆಂಗಳೂರು ನಿಜವಾಗಿಯೂ ಸುರಕ್ಷಿತ ನಗರವೆನಿಸುತ್ತದೆ. ಪೊಲೀಸರಿಗೂ ಉತ್ತಮ ಹೆಸರು ಬರಲಿದೆ ಎಂದರು.