ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬೆಳಗಾವಿ ವಿಮಾನ ನಿಲ್ದಾಣ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಲಿದೆ

06:42 PM May 03, 2024 IST | Samyukta Karnataka

ಬೆಳಗಾವಿ: ಬೆಳಗಾವಿ ವಿಮಾನ ನಿಲ್ದಾಣ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಲಿದೆ. ಇದರಿಂದ ಹೆಚ್ಚು ಆರ್ಥಿಕ ಚಟುವಟಿಕೆಗಳು ಆರಂಭ ಆಗುತ್ತದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆದರೆ ರೈತರು ಬೆಳೆಯುವ ಬೆಳೆಗಳು ಬೇರೆ ಬೇರೆ ದೇಶಗಳಿಗೆ ರಫ್ತು ಮಾಡಲು ಅವಕಾಶ ಸಿಗಲಿದೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿ ಜಿಲ್ಲೆಯ ಮಡಿವಾಳ ಸಮಾಜದ ಜೊತೆ ಸಮಾಲೋಚನೆ ಮಾಡಿ ಮತಯಾಚನೆ ಮಾಡಿದರು. ಈ ವೇಳೆ ಮಾತನಾಡದ ಜಗದೀಶ್ ಶೆಟ್ಟರ್ ಅವರು, ಮಂಗಳ ಅಂಗಡಿಯವರು ಕೂಡಾ ಬೆಳಗಾವಿ ವಿಮಾನ ನಿಲ್ದಾಣ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಲಿದೆ. ಹವಾಯಿ ಚಪ್ಪಲಿ ಹಾಕುಕೊಳ್ಳುವ ಸಾಮಾನ್ಯ ವ್ಯಕ್ತಿ ಕೂಡಾ ವಿಮಾನದಲ್ಲಿ ಪ್ರಯಾಣ ಮಾಡಬೇಕು ಎಂಬ ಆಸೆ ನರೇಂದ್ರ ಮೋದಿಯವರಿಗೆ ಇದೆ. ವಿಮಾನದ ಮೂಲಕ ಅತೀ ಕಡಿಮೆ ದರದಲ್ಲಿ ಬೇರೆಬೇರೆ ಕಡೆ ಪ್ರಯಾಣ ಮಾಡುವ ಅವಕಾಶ ನರೇಂದ್ರ ಮೋದಿಯವರು ಕಲ್ಪಿಸಿದ್ದಾರೆ. ವಿಮಾನದ ಮೂಲಕ ಪ್ರಯಾಣ ಮಾಡುವುದರಿಂದ ಬಹಳಷ್ಟು ಸಮಯದ ಉಳಿತಾಯ ಆಗಲಿದೆ ಎಂದು ತಿಳಿಸಿದರು.

Next Article