ಬೊಮ್ಮಾಯಿಗೆ ಮೋದಿ ಪತ್ರ
09:27 PM Apr 30, 2024 IST
|
Samyukta Karnataka
ಹಾವೇರಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪತ್ರ ಬರೆದು, ಚುನಾವಣೆಯಲ್ಲಿ ಗೆದ್ದು ಬರುವಂತೆ ಶುಭ ಕೋರಿದ್ದಾರೆ. ನೀವು ಸಂಸದರಾಗಿ ನನ್ನ ತಂಡ ಸೇರುತ್ತಿರುವುದು ದೊಡ್ಡ ಆಸ್ತಿ ಎಂದು ತಿಳಿಸಿದ್ದಾರೆ.
ಈ ಕುರಿತು ಸುದೀರ್ಘ ಪತ್ರ ಬರೆದಿರುವ ಅವರು, ನೀವು ಮುಖ್ಯಮಂತ್ರಿಯಾಗಿ, ನೀರಾವರಿ ಸಚಿವರಾಗಿ ಗೃಹ ಸಚಿವರಾಗಿ, ಕಾನೂನು ಸಚಿವರಾಗಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದೀರಿ. ನಿಮ್ಮ ಅನುಭವ ದೇಶ ನಡೆಸಲು, ಹಾವೇರಿ ಕ್ಷೇತ್ರದ ಅಭಿವೃದ್ಧಿಗೆ ಪೂರಕ ಎಂದು ಶ್ಲಾಘಿಸಿದ್ದಾರೆ.
ಈಗ ಬೇಸಿಗೆ ಇರುವುದರಿಂದ ಜನರಿಗೆ ಸಮಸ್ಯೆಯಾಗುತ್ತಿದೆ. ಆದರೆ, ದೇಶದ ಭವಿಷ್ಯದ ದೃಷ್ಟಿಯಿಂದ ಈ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಆದಷ್ಟು ಬೆಳಗಿನ ಸಮಯ ಮತಗಟ್ಟೆಗೆ ತೆರಳಿ ಮತದಾನ ಮಾಡುವಂತೆ ಮೋದಿ ಮತದಾರರಿಗೆ ಮನವಿ ಮಾಡಿದ್ದಾರೆ.
Next Article