ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಂಡ್ಯದಿಂದಲೇ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧೆ

08:42 PM Feb 23, 2024 IST | Samyukta Karnataka

ಮಂಡ್ಯ: ನಾನು ಈ ಬಾರಿ ಲೋಕಸಭೆಗೆ ನನ್ನ ಸ್ಪರ್ಧೆ ಖಚಿತ. ಮಂಡ್ಯದಿಂದಲೇ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಸಂಸದೆ ಸುಮಲತಾ ಅಂಬರೀಶ್ ಘೋಷಣೆ ಮಾಡಿದರು.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 5 ವರ್ಷಗಳ ದಿಶಾ ಸಭೆಗಳಲ್ಲಿ ಹಲವು ವಿಷಯ ಚರ್ಚೆಯಾಗಿದೆ. ಚರ್ಚೆಯಾದ ವಿಷಯ ಎಷ್ಟರ ಮಟ್ಟಿಗೆ ಜಾರಿಯಾಗಿದೆ ಅನ್ನೋ ಬಗ್ಗೆ ವಿವರ ಕೇಳಬೇಕು. ಭ್ರೂಣ ಹತ್ಯೆ ಬಗ್ಗೆ ನಾನು 4 ವರ್ಷಗಳ ಹಿಂದೆಯೆ ಪ್ರಸ್ತಾಪ ಮಾಡಿದ್ದೆ. ಆದರೆ ಅದರ ವಿರುದ್ಧ ಸರಿಯಾದ ಕ್ರಮ ಆಗಲಿಲ್ಲ. ಭ್ರೂಣ ಹತ್ಯೆ ತಡೆಯಲು ಜಿಲ್ಲಾಡಳಿತ ವಿಫಲವಾಗಿದ್ದು ಬೇಸರ ತಂದಿದೆ. ಇಂದಿನ ಸಭೆಯಲ್ಲಿ ಕೇಂದ್ರದ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದರು.
ಬೇಬಿಬೆಟ್ಟ ಟ್ರಯಲ್ ಬ್ಲಾಸ್ಟ್ ವಿಚಾರವಾಗಿ ಮಾತನಾಡಿದ ಅವರು, ಟ್ರಯಲ್ ಬ್ಲಾಸ್ಟ್‌ಗೆ ಕೋರ್ಟ್ ಆದೇಶ ಇದೆ. ಆದರೆ ವಾಸ್ತವ ಮಾಹಿತಿಯನ್ನು ಅಧಿಕಾರಗಳಿಗೆ ತಿಳಿಸಿದ್ದೇನೆ. ಟ್ರಯಲ್ ಬ್ಲಾಸ್ಟ್‌ಗೆ ರೈತರ ವಿರೋಧ ಇದೆ‌. ರೈತರ ಮನವಿಯಲ್ಲಿ ನ್ಯಾಯ ಇದೆ, ನಾನು ಅವರೊಂದಿಗಿದ್ದೇನೆ. ಟ್ರಯಲ್ ಬ್ಲಾಸ್ಟ್ ನಡೆಸಿದರೆ ಅನುಕೂಲಕಕ್ಕಿಂತ ಅನಾನುಕೂಲ ಜಾಸ್ತಿ. ಟ್ರಯಲ್ ಬ್ಲಾಸ್ಟ್‌ಗೆ ಸ್ಟೇ ಆರ್ಡರ್ ತರಲು ರೈತ ಸಂಘ ಮುಂದಾಗಿದೆ. ಜಿಲ್ಲಾಡಳಿತಕ್ಕೆ ಮೇಲ್ಮನವಿ ಸಲ್ಲಿಸುವ ಅವಕಾಶ ಇಲ್ಲ ಎಂದರು.
ಜೆಡಿಎಸ್‌ಗೆ ಮಂಡ್ಯ ಕ್ಷೇತ್ರ ಕೊಡುವ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದಂತ ಅವರು, ಅಂತೆ ಕಂತೆ ಮೊದಲಿನಿಂದಲೂ ಇದೆ. ಅಧಿಕೃತ ನಿರ್ಧಾರ ಬರೋವರೆಗೂ ಕಾಯೋಣ. ನನಗೆ ವಿಶ್ವಾಸ ಇದೆ, ಮಂಡ್ಯ ಬಿಜೆಪಿಗೆ ಸಿಗಲಿದೆ. ನಾನು ನನ್ನ ಟಿಕೆಟ್‌ಗಾಗಿ ಹೋರಾಟ ಮಾಡ್ತಿಲ್ಲ ಎಂದರು.
ಮಂಡ್ಯದಲ್ಲಿ ಬಿಜೆಪಿ ಸಂಘಟಿಸಲು ನನ್ನ ಹೋರಾಟ. ನನಗೆ ಟಿಕೆಟ್ ಪಡೆಯುವ ಉದ್ದೇಶ ಇದ್ದಿದ್ದರೆ ಎಲ್ಲಾದರೂ ಅವಕಾಶ ಸಿಗ್ತಿತ್ತು. ಜೆಡಿಎಸ್‌ ನಾಯಕರು ಏನಾದರೂ ಹೇಳಬಹುದು ಆದರೆ ಅಧಿಕೃತವಾಗಬೇಕು. ಅಂತಿಮ ಘೋಷಣೆ ಆಗುವವರೆಗೂ ಮಾತನಾಡುವುದು ಸೂಕ್ತ ಅಲ್ಲ. ನನ್ನ ಸ್ಪರ್ಧೆ ಖಚಿತ ಎಂಬುದಾಗಿ ತಿಳಿಸಿದರು.

Next Article