ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮುಂದಿನ ಮೂರು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆ

04:54 PM Dec 03, 2023 IST | Samyukta Karnataka

ಬೆಂಗಳೂರು.ಗ್ರಾ(ನೆಲಮಂಗಲ): ಬೆಂಗಳೂರು ಗ್ರಾಮಾಂತರ ಪ್ರದೇಶಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸಲು ಮುಂದಿನ ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೀರೇಶ್ವರಸ್ವಾಮಿ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ ವತಿಯಿಂದ ಶ್ರೀ ಬೀರೇಶ್ವರ ಸಮುದಾಯ ಭವನ ಮತ್ತು ಪ್ರಾರ್ಥನಾ ಮಂದಿರ ಉದ್ಘಾಟಿಸಿ ಮಾತನಾಡಿದರು.
ನೆಲಮಂಗಲ ಪಟ್ಟಣಕ್ಕೆ ಕುಡಿಯುವ ನೀರಿನ ಬೇಡಿಕೆ ಇದೆ. ನೆಲಮಂಗಲ ಸುತ್ತಮುತ್ತಲ ಪ್ರದೇಶಗಳ ಕೆರೆಗಳನ್ನು ತುಂಬುವ ವೃಷಭಾವತಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. ಈ ಯೋಜನೆಯಿಂದ ನೀರಿನ ಅಂತರ್ಜಲ ಮಟ್ಟ ಹೆಚ್ಚಲಿದೆ. ಮೆಟ್ರೋ ಸಂಪರ್ಕವನ್ನು ನೆಲಮಂಗಲದವರೆಗೂ ವಿಸ್ತರಿಸುವ ಯೋಜನೆ ಸರ್ಕಾರ ಪರಿಶೀಲಿಸಲಿದೆ. ನೆಲಮಂಗಲದ ಒಳಚರಂಡಿ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಗೊಳಿಸಲಾಗುವುದು ಎಂದರು.

Next Article