ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮೋದಿಗೆ ಕ್ಯಾನ್ಸರ್: ಸ್ಪರ್ಧೆ ಇಲ್ಲ

11:04 PM Apr 03, 2024 IST | Samyukta Karnataka

ಪಟ್ನಾ: ಬಿಜೆಪಿಯ ಹಿರಿಯ ನಾಯಕ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಕಳೆದ ಆರು ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡಲು ಅಥವಾ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ಬುಧವಾರ ಹೇಳಿದ್ದಾರೆ.
ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಹಂಚಿಕೊಂಡಿದ್ದು, `ನಾನು ಕ್ಯಾನ್ಸರ್‌ನಿಂದ ಬಳಲುತ್ತಿರುವುದನ್ನು ಜನರ ಮುಂದೆ ಬಹಿರಂಗಪಡಿಸಬೇಕಾದ ಸಮಯ ಬಂದಿರುವುದಾಗಿ ಭಾವಿಸಿದ್ದೇನೆ. ಈಗ ಜನರಿಗೆ ಹೇಳುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ. ನಾನು ಯಾವಾಗಲೂ ದೇಶ, ಬಿಹಾರ ಮತ್ತು ಪಕ್ಷಕ್ಕೆ ಕೃತಜ್ಞನಾಗಿದ್ದೇನೆ' ಎಂದಿದ್ದಾರೆ.

Next Article