ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಯಾಗ ಮಾಡಿಸುವುದಕ್ಕೆ ಡಿಸಿಎಂ ಎಕ್ಸಫರ್ಟ್

07:35 PM Jun 02, 2024 IST | Samyukta Karnataka

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿ ಆಗಬೇಕು. ಇದಕ್ಕೆ ಎಕ್ಸಿಟ್ ಪೋಲ್‌ನಲ್ಲಿ ಸ್ಪಷ್ಟ ಬಹುಮತ ಸಿಕ್ಕಿದೆ. ೩೭೫ ಆಗಬಹುದು, ೪೦೦ಕ್ಕೂ ಹೆಚ್ಚು ಸ್ಥಾನ ಗೆಲ್ಲಬಹುದು ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಎಕ್ಸಿಟ್ ಪೋಲ್ ಕಾಂಗ್ರೆಸ್ ಪರವಾಗಿ ಹೇಳಿತ್ತು. ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಅಂತಾ ಎಲ್ಲೂ ಹೇಳಿರಲಿಲ್ಲ. ಕಾಂಗ್ರೆಸ್ ನಾಯಕರು ಸೋಲು ಒಪ್ಪಿಕೊಳ್ಳುವ ಬದಲು ಸಬೂಬು ಹೇಳುತ್ತಿದ್ದಾರೆ. ಬಹುತೇಕ ಎಕ್ಸಿಟ್‌ಪೋಲ್ ಎನ್‌ಡಿಎ ಪರವಾಗಿದೆ. ಶೇ.೯೯ ರಷ್ಟು ಒಂದೇ ರೀತಿ ಇವೆ ಎಂದರು.

ಬೆಳಗಾವಿಯಲ್ಲಿ ಜನರ ಆಶೀರ್ವಾದದಿಂದ ನಾನು ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಜಗದೀಶ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.

ಸಂವಿಧಾನ ಬದಲಾವಣೆ ಮಾಡುವ ಪ್ರಶ್ನೆ ಇಲ್ಲ. ಸಂವಿಧಾನ ಬದಲಾವಣೆ ಮಾಡುವ ಹಕ್ಕು ಯಾರಿಗೂ ಇಲ್ಲ. ಸಚಿವ ಪ್ರಿಯಾಂಕ್ ಖರ್ಗೆ ಸೇರಿ ಕಾಂಗ್ರೆಸ್‌ನವರು ಸುಳ್ಳು ಹೇಳುತ್ತಿದ್ದಾರೆ ಎಂದರು.

ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಕೂಡಲೇ ಸಚಿವ ನಾಗೇಂದ್ರ ಅವರ ರಾಜೀನಾಮೆಯನ್ನ ಪಡೆಯಬೇಕು. ಇದು ನಾಚಿಕೆ ಇಲ್ಲದ ಸರ್ಕಾರವಾಗಿದೆ. ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್‌ನ ಆಂತರಿಕ ಕಲಹ ಹೊರ ಬರಲಿದೆ. ಸಿಎಂ ಮತ್ತು ಡಿಸಿಎಂ ನಡುವಿನ ಕಲಹ ಹೊರಬರುತ್ತದೆ.

ಕಾಂಗ್ರೆಸ್‌ನವರ ಅಸಮಾಧಾನದಿಂದ ಅವರ ಸರ್ಕಾರ ಪತನವಾಗಲಿದೆ. ಹೀಗಾಗಿ, ಬಿಜೆಪಿ ಆಪರೇಶನ್ ಕಮಲ ಮಾಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

ಯಾಗ ಮಾಡಿಸುವುದಕ್ಕೆ ಡಿಸಿಎಂ ಎಕ್ಸಫರ್ಟ್ ಆಗಿದ್ದಾರೆ. ಕೇರಳ ಅಲ್ಲ ಭೂಗತದಲ್ಲಿ ಹೋಗಿ ಯಾಗ ಮಾಡಿಸೋ ತಾಕತ್ತು ಡಿ.ಕೆ.ಶಿವಕುಮಾರ್‌ಗೆ ಇದೆ. ಇದರಲ್ಲಿ ಡಿಕೆಶಿ ನಿಪುಣರು ಆಗಿದ್ದಾರೆ. ನಾನು ಬಸವ ತತ್ವದವನು. ನನಗೆ ಇದರಲ್ಲಿ ನಂಬಿಕೆ ಇಲ್ಲ. ಯಾಗದ ಕುರಿತು ಅವರೇ ಉತ್ತರಿಸಲಿ ಎಂದು ಹೇಳಿದರು.

Next Article