ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಯುಗಾದಿ, ಈದ್ ಪ್ರಯುಕ್ತ ಝೈದ್ ಖಾನ್ ಹಾಗೂ ಅನಿಲ್ ಕುಮಾರ್ ಚಿತ್ರದ ಟೈಟಲ್ ಟೀಸರ್ ಮತ್ತು ಫಸ್ಟ್ ಲುಕ್ ರಿಲೀಸ್

07:54 PM Apr 08, 2024 IST | Samyukta Karnataka

"ಬನಾರಸ್" ಚಿತ್ರದ ಮೂಲಕ ಗಮನ ಸೆಳೆದಿರುವ ಝೈದ್ ಖಾನ್ ಹಾಗೂ ಈ ವರ್ಷದ ಮೊದಲ ಹಿಟ್ "ಉಪಾಧ್ಯಕ್ಷ" ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ಜೋಡಿಯಲ್ಲಿ ಮೂಡಿಬರುತ್ತಿರುವ ನೂತನ ಚಿತ್ರ ಆರಂಭವಾಗುತ್ತಿರುವ ಕುರಿತು ಇತ್ತೀಚಿಗೆ ಸುದ್ದಿಯಾಗಿತ್ತು. ಅದರ ಬೆನ್ನಲ್ಲೇ ಚಿತ್ರತಂಡ ಮೊದಲ ಪೋಸ್ಟರ್ ಸಹ ಬಿಡುಗಡೆ ಮಾಡಿ ಕುತೂಹಲ ಮೂಡಿಸಿತ್ತು. ಇದೀಗ ಈ ಚಿತ್ರದ ಫಸ್ಟ್ ಲುಕ್ ಹಾಗೂ ಟೈಟಲ್ ಯುಗಾದಿ, ಈದ್ ಹಬ್ಬದಂದು (ಏಪ್ರಿಲ್ 9) ಬೆಳಗ್ಗೆ 11.11ಕ್ಕೆ ರಿಲೀಸ್ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.

ಈಗಾಗಲೇ ಕೌಂಟ್ ಡೌನ್ ಪೋಸ್ಟರ್ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಈ ಚಿತ್ರದ ಫಸ್ಟ್ ಲುಕ್ ಹೇಗಿರಬಹುದೆಂಬ ಕುತೂಹಲ ಸಿನಿ ಮಂದಿಯಲ್ಲಿ ಗರಿಗೆದರಿದೆ.

ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಎರಡನೇ ಚಿತ್ರವಿದು. ಆಶ್ರಿತ್ ಸಿನಿಮಾಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು, ರಚನೆ ಹಾಗೂ ನಿರ್ದೇಶನ ಅನಿಲ್ ಕುಮಾರ್ ನಿರ್ವಹಿಸಲಿದ್ದಾರೆ. ಜೆ.ಎಸ್.ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Next Article