ರಾಜಕೀಯ ನಿವೃತ್ತಿ ಇಲ್ಲ
ಬೆಂಗಳೂರು: ತಾವು ರಾಜಕೀಯ ನಿವೃತ್ತಿಯ ಘೋಷಣೆ ಮಾಡಿಲ್ಲ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸ್ಪಷ್ಟಪಡಿ ಸಿದ್ದಾರೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್ ಗ್ರಾಮದಲ್ಲಿ ಭಾನುವಾರ ಚುನಾವಣಾ ಪ್ರಚಾರದ ಸಭೆಯಲ್ಲಿ ಮಾತನಾಡುತ್ತಾ ರಮೇಶ್ ಕುಮಾರ್ ಅವರು, ಮುಂಬರುವ ವಿಧಾನಸಭಾ ಚುನಾವಣೆಗೆ ತಾವು ನಿಲ್ಲುವುದಿಲ್ಲ ಎಂಬ ಹೇಳಿಕೆ ನೀಡಿದ್ದರಲ್ಲದೆ, ಪ್ರಸಕ್ತ ರಾಜಕೀಯ ವ್ಯವಸ್ಥೆ ಕಲುಷಿತಗೊಂಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ತಾವು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದ ಮಾತ್ರಕ್ಕೆ ಅದು ರಾಜಕೀಯ ನಿವೃತ್ತಿ ಅಂತಲ್ಲ ಎಂದಿದ್ದಾರೆ. ಇದರೊಂದಿಗೆ ರಮೇಶಕುಮಾರ್ ಅವರ ರಾಜಕೀಯ ನಿವೃತ್ತಿಯ ಸುದ್ದಿಗೆ ತೆರೆಬಿದ್ದಂತಾಗಿದೆ. ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿ, ರಮೇಶ್ಕುಮಾರ್ ಅವರು ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದಿಲ್ಲ. ಅವರು ಸಕ್ರಿಯ ರಾಜಕಾರಣದಲ್ಲಿ ಇರುತ್ತಾರೆ ಎಂದು ಹೇಳಿದ್ದಾರೆ.