For the best experience, open
https://m.samyuktakarnataka.in
on your mobile browser.

ರಾಜ್ಯ ಸರ್ಕಾರದ ಸಾಧನೆ ಶೂನ್ಯ: ವಿಜಯೇಂದ್ರ

05:55 PM May 20, 2024 IST | Samyukta Karnataka
ರಾಜ್ಯ ಸರ್ಕಾರದ ಸಾಧನೆ ಶೂನ್ಯ  ವಿಜಯೇಂದ್ರ

ಬೆಂಗಳೂರು: ಕಳೆದೊಂದು ವರ್ಷದಿಂದ ಈ ರಾಜ್ಯ ಸರ್ಕಾರದ ಸಾಧನೆ ಶೂನ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಟೀಕಿಸಿದರು.
ಮಲ್ಲೇಶ್ವರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದು ವರ್ಷದಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿಲ್ಲ. ಗುದ್ದಲಿ ಪೂಜೆಯ ಉದಾಹರಣೆಯೂ ಇಲ್ಲ. ಆದರೆ ಬೆಲೆಗಳ ಏರಿಕೆ, ಶೂನ್ಯ ಸಾಧನೆಯೇ ಒಂದು ವರ್ಷದ ಕೊಡುಗೆ ಎಂದರು.
ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟಿದ್ದರು. ಆದರೆ ಕಳೆದೊಂದು ವರ್ಷದಲ್ಲಿ ಯಾವುದೇ ಒಂದು ಹೊಸ ಯೋಜನೆಗೆ ಚಾಲನೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿಲ್ಲ ಎಂದರು.
ನುಡಿದಂತೆ ನಡೆಯುವ ಸರ್ಕಾರ ಎಂದು ಕಾಂಗ್ರೆಸ್ಸಿಗರು ತಮ್ಮ ಬೆನ್ನನ್ನು ತಾವು ತಟ್ಟಿಕೊಳ್ಳುತ್ತಿದ್ದಾರೆ. ಜಾಹೀರಾತಿನ ಮೂಲಕ ತಮ್ಮನ್ನು ತಾವು ಹೊಗಳಿಸಿಕೊಳ್ಳುವುದು ಮತ್ತು ಅಭಿವೃದ್ಧಿ ಆಗಿದೆ ಎಂದು ಬಿಂಬಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದರು.