ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ
03:49 PM Mar 12, 2024 IST
|
Samyukta Karnataka
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 3.75ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಸಿದೆ.
ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು 38.75% ರಿಂದ 42.5% ಕ್ಕೆ ಪರಿಷ್ಕರಿಸಲು ಅನುಮೋದಿಸಿದೆ. ಕೇಂದ್ರೀಯ ವೇತನ ಶ್ರೇಣಿಯಲ್ಲಿರುವವರಿಗೆ ಇದು 46% ರಿಂದ 50% ಕ್ಕೆ ಏರಿದೆ ಎಂದಿದ್ದಾರೆ.
Next Article