For the best experience, open
https://m.samyuktakarnataka.in
on your mobile browser.

`ಲಿಂಗಾಯತರಿಗೆ' ಟಿಕೆಟ್ ಕೊಡಬೇಕಿತ್ತು

09:00 PM Mar 25, 2024 IST | Samyukta Karnataka
 ಲಿಂಗಾಯತರಿಗೆ  ಟಿಕೆಟ್ ಕೊಡಬೇಕಿತ್ತು

ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಲಿಂಗಾಯತರಿಗೆ ಟಿಕೆಟ್ ನೀಡಿದ್ದರೆ ಒಳ್ಳೆಯದಾಗುತ್ತಿತ್ತು. ನಾನೂ ಕೂಡಾ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಸಾಮಾಜಿಕ ನ್ಯಾಯದಡಿ ಬೇರೆಯವರಿಗೆ ಟಿಕೆಟ್ ನೀಡಲಾಗಿದ್ದು, ಅಭ್ಯರ್ಥಿ ಪರ ಪ್ರಾಮಾಣಿಕ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಮೋಹನ ಲಿಂಬಿಕಾಯಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಲೋಕಸಭಾ ಕ್ಷೇತ್ರ ಸೇರಿದಂತೆ ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲು ಹೆಚ್ಚಿನ ಅವಕಾಶಗಳಿವೆ. ಅದರಲ್ಲೂ ಈ ಬಾರಿ ಲಿಂಗಾಯಿತರು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ ಎಂಬುದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಾಬೀತಾಗಿದೆ. ಕಾಂಗ್ರೆಸ್ ಪಕ್ಷದಿಂದ 37 ಲಿಂಗಾಯತ ಶಾಸಕರು ಆಯ್ಕೆಯಾಗಿದ್ದರೆ ಬಿಜೆಪಿಯಿಂದ ೧೭ ಲಿಂಗಾಯಿತ ಶಾಸಕರು ಆಯ್ಕೆಯಾಗಿದ್ದಾರೆ. ಆದರೆ, ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಹಂಚಿಕೆ ವಿಷಯದಲ್ಲಿ ಬಿಜೆಪಿಯವರು ಲಿಂಗಾಯಿತರಿಗೆ ಹೆಚ್ಚಿನ ಸ್ಥಾನ ಕೊಟ್ಟಿದ್ದಾರೆ. ನಮ್ಮ ಪಕ್ಷದವರು ಕಡಿಮೆ ಕೊಟ್ಟಿದ್ದಾರೆ ಎಂದು ಆಕ್ಷೇಪಿಸಿದರು.
೩೭ ಲಿಂಗಾಯತ ಶಾಸಕರು ಆಯ್ಕೆಯಾಗಿದ್ದರೂ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಕೇವಲ ೫ ಕ್ಷೇತ್ರಕ್ಕೆ ಲಿಂಗಾಯತರಿಗೆ ಟಿಕೆಟ್ ಕೊಟ್ಟಿದೆ. ಅದೇ ಬಿಜೆಪಿಯು ೧೭ ಶಾಸಕರು ಆಯ್ಕೆಯಾಗಿದ್ದರೂ ೯ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್‌ನ್ನು ಲಿಂಗಾಯತರಿಗೆ ಕೊಟ್ಟಿದೆ. ಇದ್ಯಾವ ನ್ಯಾಯ? ಪಕ್ಷದ ವೇದಿಕೆಯಲ್ಲಿ, ನಾಯಕರಲ್ಲಿ ಈ ಕುರಿತು ಏನು ಪ್ರಸ್ತಾಪ ಮಾಡಬೇಕಿತ್ತೊ ಅದೆಲ್ಲವನ್ನೂ ತಿಳಿಸಿದ್ದೇನೆ ಎಂದು ಹೇಳಿದರು.