ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು

08:41 PM Jul 05, 2024 IST | Samyukta Karnataka

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಎಸ್‌ಸಿಸಿಪಿ/ಟಿ.ಎಸ್.ಪಿ ರಾಜ್ಯ ಅಭಿವೃದ್ದಿ ಪರಿಷತ್‌ ಸಭೆಯ ಬಳಿಕ ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಪ್ರಾಥಮಿಕ ಶಾಲೆಯಲ್ಲಿ ನಾನು ಕಲಿತ ಕನ್ನಡ ವ್ಯಾಕರಣ ಪಾಠಗಳು ಉಸಿರಿರುವವ ವರೆಗೆ ಹಸಿರಾಗಿರಲಿದೆ. ಕನ್ನಡ ಭಾಷೆಯ ಸೌಂದರ್ಯವನ್ನು ಬಣ್ಣಿಸುವ, ವ್ಯಾಕರಣದ ಬಗ್ಗೆ ವಿವರಿಸುವ ಅವಕಾಶ ಸಿಕ್ಕಾಗಲೆಲ್ಲ ಸಂಧಿಗಳು, ಸಮಾಸಗಳು, ಸ್ವರ, ವ್ಯಂಜನಗಳು ಥಟ್ಟನೆ ನೆನಪಾಗುತ್ತವೆ. ಅದು ಶಾಲಾ ಕೊಠಡಿಯೇ ಇರಲಿ, ವಿಧಾನಸಭೆಯೇ ಆಗಿರಲಿ. ಮುತ್ತು ಪೋಣಿಸಿದಂತೆ ಬಿಡಿ ಬಿಡಿಯಾಗಿ ಕಣ್ಣಮುಂದೆ ಬರುತ್ತದೆ. ಯಾವುದೇ ಭಾಷೆಯಾಗಿರಲಿ ಅದು ಹೃದಯಕ್ಕೆ ಹತ್ತಿರವಾದಾಗ ಮಾತ್ರ ಜೀವಂತಿಕೆಯನ್ನು ಉಳಿಸಿಕೊಳ್ಳುತ್ತದೆ.
ಹಾಗಾಗಿಯೇ ಕನ್ನಡ ನನಗೆ ಆಡು ಭಾಷೆಯೂ ಹೌದು, ನಾಡಭಾಷೆಯೂ ಹೌದು, ನನ್ನ ಹೆತ್ತ ತಾಯಿಭಾಷೆಯೂ ಹೌದು ಎಂದರು. ಇನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆ ಕುರಿತು ಇತರ ಶಾಲೆಗಳಿಗೆ ಹೋಲಿಸಿದರೆ ವಸತಿ ಶಾಲೆಗಳು ಗುಣಮಟ್ಟದಲ್ಲಿ ಉತ್ತಮವಾಗಿವೆ. ಅದನ್ನು ಉತ್ಕೃಷ್ಟ ಮಟ್ಟಕ್ಕೇರಿಸಲು ಇನ್ನಷ್ಟು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು. ರಾಜ್ಯದಲ್ಲಿ 833 ವಸತಿ ಶಾಲೆಗಳಿದ್ದು, ಎಲ್ಲಾ ವಸತಿ ಶಾಲೆಗಳಿಗೆ ಸುಸಜ್ಜಿತವಾದ ಕಟ್ಟಡಗಳನ್ನು ಹಂತಹಂತವಾಗಿ ನಿರ್ಮಿಸಲಾಗುತ್ತಿದೆ. ಎಲ್ಲಾ ಆಶ್ರಮ ಶಾಲೆಗಳನ್ನು ವಸತಿ ಶಾಲೆಗಳಾಗಿ ಪರಿರ್ವತಿಸುತ್ತಿದ್ದೇವೆ. ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಊಟ, ವಾಸ್ತವ್ಯ ವ್ಯವಸ್ಥೆ ಮಾತ್ರವಲ್ಲದೆ ಇಂಗ್ಲಿಷ್‌, ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಕೋಚಿಂಗ್‌ ಸಹ ನೀಡುತ್ತಿದ್ದೇವೆ. ಚಾಮರಾಜಪೇಟೆಯ ಸರ್ಕಾರಿ ಶಾಲೆಯನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆಯಾಗಿ ಪರಿವರ್ತಿಸಲಾಗಿದೆ. ಪ್ರಸ್ತುತ ಇಲ್ಲಿ 218 ಮಕ್ಕಳಿದ್ದಾರೆ. ಆಹಾರದ ಗುಣಮಟ್ಟದ ಪರೀಕ್ಷೆಗಾಗಿ ಊಟ ಮಾಡಿದೆ, ಊಟ ತುಂಬಾ ಚೆನ್ನಾಗಿತ್ತು ಎಂದರು.

ಸಿಎಂ ಸಿದ್ದರಾಮಯ್ಯರಿಂದ ವ್ಯಾಕರಣ ಪಾಠದ ವಿಡಿಯೋ ನೋಡಿ

Next Article